/newsfirstlive-kannada/media/media_files/2025/11/05/mid-day-meal-scheme-extend-to-pu-students-2025-11-05-15-59-24.jpg)
ಮಧ್ಯಾಹ್ನದ ಬಿಸಿಯೂಟ ಯೋಜನೆ ಪಿಯು ವಿದ್ಯಾರ್ಥಿಗಳಿಗೆ ವಿಸ್ತರಣೆಗೆ ಚಿಂತನೆ
ಇನ್ಮುಂದೆ ರಾಜ್ಯದ ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಮಕ್ಕಳ ದಿನಾಚರಣೆಗೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಗಲಿದೆ. ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಿಸಲು ಪ್ಲ್ಯಾನ್ ಮಾಡಲಾಗಿದೆ. ನವೆಂಬರ್ 14 ರಂದು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಗುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಅವರಿಂದ ಮಹತ್ವದ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಸದ್ಯ 1ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಭಾಗ್ಯ ಲಭಿಸಿದೆ. ಈಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಊಟ ನೀಡಲು ಚಿಂತನೆ ಇದೆ. ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಸರ್ಕಾರಿ ಪಿಯು ವಿದ್ಯಾರ್ಥಿಗಳಿದ್ದಾರೆ. ಗ್ರಾಮೀಣ ಭಾಗದಲ್ಲೇ ಅತಿ ಹೆಚ್ಚು ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಬಂದ್ರೆ ಬಹಳಷ್ಟು ಸಹಾಯಕ ಆಗಲಿದೆ.
/filters:format(webp)/newsfirstlive-kannada/media/media_files/2025/11/05/mid-day-meal-scheme-extend-to-pu-students02-2025-11-05-16-02-34.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us