/newsfirstlive-kannada/media/media_files/2025/12/22/aiysee-exam-1-2025-12-22-16-56-44.jpg)
ಆಲ್​ ಇಂಡಿಯಾ ಯೂತ್​​​​ ಸ್ಕಾಲರ್ ಷಿಪ್ ​​ ಎಂಟ್ರೇನ್ಸ್​ ಎಕ್ಸಾಂ.. ಇದನ್ನು AIYSEE ಅಂತಲೂ ಕರೆಯುತ್ತಾರೆ. ಈ ಎಂಟ್ರೇನ್ಸ್​ ಎಕ್ಸಾಂ ಇಡೀ ಭಾರತದಾದ್ಯಂತ ಇಂಜಿನಿಯರಿಂಗ್​ ಮತ್ತು ಮೆಡಿಕಲ್​​ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬೆಂಬಲಿಸಲು ಡಿಸೈನ್​ ಮಾಡಲಾದ ರಾಷ್ಟ್ರ ಮಟ್ಟದ ಅರ್ಹತಾ ಆಧರಿತ ವಿದ್ಯಾರ್ಥಿವೇತನ ಪ್ರೋಗ್ರಾಂ ಆಗಿದೆ.
ಇನ್ನು, ಇದೊಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಇದುವರೆಗೂ ಸುಮಾರು 2 ಲಕ್ಷಕ್ಕೂ ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸಿದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಹಣಕಾಸಿನ ನೆರವು ನೀಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
ಈ ಸ್ಕಾಲರ್ ಷಿಪ್ ​ ಪಡೆಯಲು ಅರ್ಹತಾ ಮಾನದಂಡಗಳು ಏನು ಅಂತಾ ನೋಡೋದಾದ್ರೆ..!
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಭಾರತದ ಯಾವುದೇ ರಾಜ್ಯದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿದಾರರು 2025ರಲ್ಲಿ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಅಭ್ಯರ್ಥಿಗಳು NEET ಅಥವಾ JEE ನಂತಹ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ಕಡ್ಡಾಯವಾಗಿ ಹಾಜರಾಗಿರಬೇಕು. ಈ ಮಾನದಂಡಗಳನ್ನು ಪೂರೈಸುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವಿದ್ಯಾರ್ಥಿವೇತನದ ಪ್ರಯೋಜನಗಳು ಏನು ಅಂತಾ ನೋಡೋದಾದ್ರೆ..!
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮತ್ತು ಹಾಸ್ಟೆಲ್ ಶುಲ್ಕ ಸೇರಿದಂತೆ ಶೇ.100ರಷ್ಟು ಶೈಕ್ಷಣಿಕ ವೆಚ್ಚಗಳನ್ನು ಭರಿಸುವ ವಿದ್ಯಾರ್ಥಿವೇತನ ನೀಡಲಾಗುತ್ತದೆ. AIYSEE ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಸೌಲಭ್ಯಗಳನ್ನು ವಿಂಗಡಿಸಲಾಗಿದ್ದು, ಗರಿಷ್ಠ ಅಂಕ ಗಳಿಸಿದವರಿಗೆ 4 ರಿಂದ 5 ವರ್ಷಗಳ ಪೂರ್ಣ ವಿದ್ಯಾರ್ಥಿವೇತನ ಲಭ್ಯವಿದೆ. ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಅಥವಾ ಮೊಬೈಲ್‌ನಂತಹ ಬಹುಮಾನಗಳನ್ನು ನೀಡಲಾಗುತ್ತದೆ. ಕಡಿಮೆ ಅಂಕ ಗಳಿಸಿದವರಿಗೆ ಸೆಮಿಸ್ಟರ್ ಆಧಾರಿತ ಸ್ಟೈಫಂಡ್ ವ್ಯವಸ್ಥೆ ಮಾಡಲಾಗಿದೆ.
/filters:format(webp)/newsfirstlive-kannada/media/media_files/2025/12/22/aiysee-exam-3-2025-12-22-16-58-10.jpg)
ಅಗತ್ಯವಿರುವ ದಾಖಲೆಗಳು ಏನು ಅಂತಾ ನೋಡೋದಾದ್ರೆ..!
ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳು, JEE/NEET ನಂತಹ ಪ್ರವೇಶ ಪರೀಕ್ಷೆಯ ಱಂಕ್​ ಕಾರ್ಡ್ ಮತ್ತು ಕಾಲೇಜಿನ ಪ್ರವೇಶ ಪತ್ರವನ್ನು ಹೊಂದಿರಬೇಕು. ಇದರ ಜೊತೆಗೆ ಪೋಷಕರ ಆದಾಯ ಪ್ರಮಾಣಪತ್ರ, ಪ್ರಸ್ತುತ ವರ್ಷದ ಶುಲ್ಕದ ರಶೀದಿ, ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ನಿವಾಸದ ಮುಂದೆ ಕುಟುಂಬದ ಸದಸ್ಯರೊಂದಿಗೆ ತೆಗೆದ ಫೋಟೋವನ್ನು ಅಪ್‌ಲೋಡ್ ಮಾಡಬೇಕು. ಕಾಲೇಜಿನಿಂದ ಪಡೆದ ಉತ್ತಮ ನಡತೆ ಪ್ರಮಾಣಪತ್ರವೂ ಈ ಪ್ರಕ್ರಿಯೆಗೆ ಅವಶ್ಯಕವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಶುಲ್ಕ ಎಷ್ಟು ಅಂತಾ ನೋಡೋದಾದ್ರೆ..!
ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.aiysee.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮೊದಲು Apply Now ಕ್ಲಿಕ್ ಮಾಡಿ, ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ₹1,100 ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಯ ಸರಣಿಯ ಮೂಲಕ ಪೂರ್ವಸಿದ್ಧತೆಯನ್ನು ಸಹ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು 2025 ಡಿಸೆಂಬರ್ 31 ಕೊನೆಯ ದಿನಾಂಕವಾಗಿದ್ದು, ಜೂನ್ ಅಂತ್ಯದಲ್ಲಿ ಅರ್ಜಿ ತಿದ್ದುಪಡಿಗೆ ಅವಕಾಶವಿರುತ್ತದೆ. ಪರೀಕ್ಷೆಯು ಜುಲೈ 25 ರಿಂದ 30, 2026 ರವರೆಗೆ ಆನ್‌ಲೈನ್ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ/ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದ 90 ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಪರೀಕ್ಷೆಯ ಫಲಿತಾಂಶಗಳನ್ನು ಸೆಪ್ಟೆಂಬರ್ 15 ರಿಂದ 20 ರ ನಡುವೆ ಘೋಷಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು 080-66085666 ಸಂಖ್ಯೆಯನ್ನು ಸಂಪರ್ಕಿಸಬಹುದು.
/filters:format(webp)/newsfirstlive-kannada/media/media_files/2025/12/22/aiysee-exam-2025-12-22-16-58-28.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us