/newsfirstlive-kannada/media/post_attachments/wp-content/uploads/2024/11/JOB_EXAMS_KPSC.jpg)
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿರೋ ಖಾಲಿ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಇದರ ಭಾಗವಾಗಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಇವತ್ತು ಪರೀಕ್ಷೆ ನಡೆಯಲಿದ್ದು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಬಿಗಿ ಕ್ರಮಗಳನ್ನು ಕೈಗೊಂಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಇರೋ ಖಾಲಿ ಹುದ್ದೆಗಳಿಗೆ ಸುಮಾರು 24,800 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರ್ದು. ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರ ಸೂಚಿಸಿದೆ.
ಇದನ್ನೂ ಓದಿ:ಸ್ಪರ್ಧಿಗಳಿಗೆ ಬಿಗ್ ಶಾಕ್ ಕೊಟ್ಟ ಬಿಗ್​ ಬಾಸ್​, ಇವತ್ತು ಡಬಲ್ ಎಲಿಮಿನೇಷ್..!
ಹಾಗಾಗಿ ಪರೀಕ್ಷಾ ಕೊಠಡಿಯಲ್ಲಿ ನೆಟ್‌ವರ್ಕ್ ಜಾಮರ್ ಅಳವಡಿಸಲಾಗಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂಧವಿದೆ. ಫೇಸ್​​ ಸ್ಕ್ಯಾನ್​​​ ಮಾಡಿ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ಯೂನಿಫಾರ್ಮ್​​ ಕೂಡ ಇದ್ದು, ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಲೇಬೇಕಿದೆ.
ಬೆಂಗಳೂರಿನ 7 ಕೇಂದ್ರಗಳಲ್ಲಿ 3,486 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ 21,198 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಇವತ್ತು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಇದನ್ನೂ ಓದಿ: ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ : ಇಬ್ಬರು ಮಹಿಳೆಯರನ್ನು ಬಂಧಿಸಿದ ಪೊಲೀಸರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us