ಮದುವೆಯಾಗಲು ಹೆಣ್ಣು ಸಿಗದೆ ಕೃಷಿಕ ಆತ್ಮಹತ್ಯೆ
ಮನನೊಂದು ನೇಣಿಗೆ ಕೊರಳೊಡ್ಡಿದ ಕೃಷಿಕ ಯುವಕ
ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿರಸಿ: ಯುವಕನೋರ್ವ ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಅಲ್ಲಿನ ತೇಲಂಗಾರ ನಿವಾಸಿ ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ.
ನಾಗರಾಜ ಗಣಪತಿ ಗಾಂವ್ಕರ ಕೃಷಿ ಮಾಡಿಕೊಂಡು ಜೀವನಸಾಗಿಸುತ್ತಿದ್ದ. ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದಿದ್ದ. ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ