ಇತ್ತೀಚೆಗೆ ನಡೆದ 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ
ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆಲ್ಲಲು ಕೊಹ್ಲಿಯೇ ಕಾರಣ!
ಕ್ಯಾಪ್ಟನ್ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಹೆಸರು ಬಿಟ್ಟಿದ್ದೇಕೆ?
ಅಮೆರಿಕಾದಲ್ಲಿ ನಡೆದ 2024ರ ಟಿ20 ವಿಶ್ವಕಪ್ ಗೆದ್ದು ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ತಂಡಕ್ಕೆ ಗೆಲುವು ತಂದುಕೊಟ್ಟು ಬ್ಯಾಟರ್ ವಿರಾಟ್ ಕೊಹ್ಲಿ ಈಗಾಗಲೇ ಟಿ20ಗೆ ವಿದಾಯ ಘೋಷಿಸಿದ್ದಾರೆ. ಟಿ20 ವಿಶ್ವಕಪ್ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ರು.
ಫೈನಲ್‌ಗೂ ಮುನ್ನ ಕೊಹ್ಲಿ ಆಡಿದ 7 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 75 ರನ್. ಬಾಂಗ್ಲಾದೇಶದ ವಿರುದ್ಧ ಹೊಡೆದ 37 ರನ್ ಗರಿಷ್ಠವಾಗಿತ್ತು. ಅಷ್ಟೂ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕೊಹ್ಲಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ, ಫೈನಲ್‌ನಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಬಿದ್ರೂ ಕ್ರೀಸ್ನಲ್ಲೇ ನಿಂತು ಬ್ಯಾಟ್ ಬೀಸಿ ಕೊಹ್ಲಿ 48 ಎಸೆತಗಳಲ್ಲಿ 4 ಫೋರ್ ಸಮೇತ 76 ರನ್ ಸಿಡಿಸಿ ಗೆಲುವಿಗೆ ಕಾರಣರಾದರು. ಒಂದು ರೀತಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದೇ ಕೊಹ್ಲಿ. ಈಗ ಕೊಹ್ಲಿ ಹೆಸರನ್ನೇ ಕ್ಯಾಪ್ಟನ್ ರೋಹಿತ್ ಶರ್ಮಾ ಬಿಟ್ಟಿದ್ದಾರೆ.
ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲ್ಲಲು ಹಲವು ಆಟಗಾರರ ಪಾತ್ರವಿದೆ. ಎಲ್ಲಾ ಆಟಗಾರರು ತಮ್ಮ ಮೇಲೆ ಇಟ್ಟಿದ್ದ ನಂಬಿಕೆಗೆ ತಕ್ಕಂತೆ ಆಟವಾಡಿದ್ದಾರೆ. ಅದರಲ್ಲೂ ಕೊಹ್ಲಿ ಗಳಿಸಿದ ರನ್ ಮಹತ್ವದ್ದು. ಹೀಗಿರುವಾಗ ಭಾರತದ ಗೆಲುವಿಗೆ ವಿರಾಟ್ ಕೊಹ್ಲಿ, ಜಸ್ಪ್ರಿತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅಲ್ಲ. ಬದಲಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಂದಿದ್ದಾರೆ ರೋಹಿತ್.
ಕ್ಯಾಪ್ಟನ್ ರೋಹಿತ್ ಶರ್ಮಾ ಹೇಳಿದ್ದೇನು..?
ನಾವು ಟಿ20 ವಿಶ್ವಕಪ್ ಗೆದ್ದಿದ್ದು ಖುಷಿ ಆಯ್ತು. ಈ ಗೆಲುವಿನ ಕ್ರೆಡಿಟ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಸೇರಿದ್ದು. ಇವರ ಸಹಾಯದಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದಿದ್ದಾರೆ.
ಇದನ್ನೂ ಓದಿ: ‘ಭಾರತ ಟಿ20 ವಿಶ್ವಕಪ್ ಗೆಲ್ಲಲು ಈ ಮೂವರೇ ಕಾರಣ’- ಕೊನೆಗೂ ಸತ್ಯ ಬಿಚ್ಚಿಟ್ಟ ಕ್ಯಾಪ್ಟನ್ ರೋಹಿತ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ