ಇತ್ತೀಚೆಗೆ ನಡೆದ 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ!
ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆಲ್ಲಲು ಅಸಲಿ ಕಾರಣ ಯಾರು?
ತ್ರಿಮೂರ್ತಿಗಳೇ ಭಾರತದ ಗೆಲುವಿಗೆ ಕಾರಣ ಎಂದ ಕ್ಯಾಪ್ಟನ್ ರೋಹಿತ್
ಇತ್ತೀಚೆಗಷ್ಟೇ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ 2024ರ ಟಿ20 ವಿಶ್ವಕಪ್ ಗೆದ್ದಿತ್ತು. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ 2ನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು.
ಇನ್ನು, ಈ ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲ್ಲಲು ಹಲವು ಆಟಗಾರರ ಪಾತ್ರವಿದೆ. ಎಲ್ಲಾ ಆಟಗಾರರು ತಮ್ಮ ಮೇಲೆ ಇಟ್ಟಿದ್ದ ನಂಬಿಕೆಗೆ ತಕ್ಕಂತೆ ಆಟವಾಡಿದ್ದಾರೆ. ಈ ಬಗ್ಗೆ ಮಾತಾಡಿರೋ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಗೆಲುವಿಗೆ ಅಸಲಿ ಕಾರಣ ಯಾರು ಎಂದು ಬಹಿರಂಗ ಪಡಿಸಿದ್ರು. ಈ ಗೆಲುವಿಗೆ ಈ ಮೂವರೇ ಕಾರಣ ಎಂದಿದ್ದಾರೆ ರೋಹಿತ್.
ತ್ರಿಮೂರ್ತಿಗಳು ಎಂದರೆ ವಿರಾಟ್ ಕೊಹ್ಲಿ, ಜಸ್ಪ್ರಿತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅಲ್ಲ. ಬದಲಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಂಬುದು.
ಕ್ಯಾಪ್ಟನ್ ರೋಹಿತ್ ಶರ್ಮಾ ಹೇಳಿದ್ದೇನು..?
ನಾವು ಟಿ20 ವಿಶ್ವಕಪ್ ಗೆದ್ದಿದ್ದು ಖುಷಿ ಆಯ್ತು. ಇಡೀ ತಂಡ ಭಾರತ ಕ್ರಿಕೆಟ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಈ ಗೆಲುವಿನ ಕ್ರೆಡಿಟ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಸೇರಿದ್ದು. ಇವರ ಸಹಾಯದಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ