ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ

author-image
AS Harshith
Updated On
ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
Advertisment
  • ಉಪನಯನ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ
  • ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿದ ಕಾರು
  • ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿ ಅಪಘಾತ

ಚಿತ್ರದುರ್ಗ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮವಾಗಿ ಹಾದು ಹೋಗುವ ಹೈವೇ ಬ್ರಿಡ್ಜ್ ಸಮೀಪ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಳ್ಳಾರಿ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳನ್ನು ಗೋಪಿನಾಥ್ (52), ಲಲಿತಮ್ಮ (47) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಭಾರೀ ಮಳೆಯ ಮುನ್ಸೂಚನೆ.. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಡಿಸಿ ಆದೇಶ

ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಬೈಕ್​​ಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​.. ಸವಾರ ಸ್ಥಳದಲ್ಲೇ ಸಾವು

ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment