/newsfirstlive-kannada/media/post_attachments/wp-content/uploads/2024/06/Udupi-Car-1.jpg)
ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಡಿಕ್ಕಿ ಹೊಡೆದ ಕಾರೊಂದು ನಜ್ಜುಗುಜ್ಜಾದ ಗಟನೆ ನಡೆದಿದೆ.
ಉಡುಪಿ ನಗರದ ಅಂಬಾಗಿಲು ಭಾಗದಲ್ಲಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇದನ್ನೂ ಓದಿ: 3 ವರ್ಷದ ಹೆಣ್ಣು ಮಗುವನ್ನು ಕೊಂದ ತಾಯಿ.. ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸಿಕ್ಕಿಬಿದ್ದಳು!
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾತ್ರವಲ್ಲದೆ ಕಾರಿ ಬಿಡಿ ಭಾಗಗಳು ರಸ್ತೆಯೆಲ್ಲಾ ಹರಡಿಕೊಂಡಿವೆ. ಕಾರಿನ ಇಂಜಿನ್ ಕೆಲ ದೂರ ಹೋಗಿ ಬಿದ್ದಿದೆ.
ಇದನ್ನೂ ಓದಿ: ದರ್ಶನ್ ಮತ್ತು ಗ್ಯಾಂಗ್ ವಿರುದ್ದ ಸದ್ಯ ಸಿಕ್ಕಿರುವ ಎವಿಡೆನ್ಸ್ಗಳಿಷ್ಟು! ಇದರಿಂದ ತಪ್ಪಿಸಿಕೊಳ್ಳೋಕೆ ಸಾಧ್ಯನೇ ಇಲ್ಲ
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಮಾರುತಿ ಎಸ್ ಕ್ರಾಸ್ ಕಾರು ಅಪಘಾತಕ್ಕೀಡಾಗಿದ್ದು, ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ