newsfirstkannada.com

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅಪಘಾತ; ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

Share :

Published July 6, 2024 at 6:04pm

  ಬೆಂಗಳೂರಿಂದ ಮೈಸೂರಿಗೆ ಹೋಗುತ್ತಿದ್ದಾಗ ಕಾರು ಭೀಕರ ಅಪಘಾತ

  ನಿಯಂತ್ರಣ ತಪ್ಪಿ ಎಡಗಡೆ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು ಪಲ್ಟಿ

  ಮಂಡ್ಯ ಜಿಲ್ಲೆಯ ಸಮೀಪ ಸ್ವಲ್ಪದರಲ್ಲೇ ತಪ್ಪಿದೆ ಭಾರೀ ದುರಂತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಹೋಗುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ನಡೆದಿದೆ. ತಡೆಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಏಕಾಏಕಿ ಪಲ್ಟಿಯಾಗಿದೆ.

ಇದನ್ನೂ ಓದಿ: ‘ತಿಮ್ಮಿ ಥರಾ ಇದ್ಲು.. ಪವಿತ್ರಾ ಟ್ರ್ಯಾಪ್​ಗೆ ದರ್ಶನ್​ ತಗ್ಲಾಕೊಂಡ್ರು’ ನಿರ್ದೇಶಕಿ ಚಂದ್ರಕಲಾ ಬಿಚ್ಚಿಟ್ರು ಅಚ್ಚರಿಯ ಮಾಹಿತಿ

ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಪಲ್ಟಿಯಾಗಿದ್ದರಿಂದ ಚಾಲಕನ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರು ಗಾಯಗೊಂಡ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ತೆರಳುತ್ತಿದ್ದ. ಕಾರು ಅತಿ ವೇಗವಾಗಿ ಬರ್ತಿದ್ದ ಕಾರಣ ಎಕ್ಸ್ ಪ್ರೆಸ್ ಹೈವೇ ಎಡಗಡೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅಪಘಾತ; ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

https://newsfirstlive.com/wp-content/uploads/2024/07/car-accident.jpg

Load More