/newsfirstlive-kannada/media/post_attachments/wp-content/uploads/2024/04/accident1.jpg)
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಬುಗುರಿಯಂತೆ ತಿರುಗಿದ ಘಟನೆ ನಗರದ ಹೊಸ ಬಡಾವಣೆ ಪೊಲೀಸ್ ಠಾಣೆಯ ಮುಂಭಾಗ ಸಂಭವಿಸಿದೆ. ಅಪಘಾತ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮಾಹಿತಿ ಪ್ರಕಾರ KA52M8188 ನಂಬರಿನನ ಟಾಟಾ ನೆಕ್ಸಾನ್ ಕಾರಿನ ಚಾಲನೊಬ್ಬ ಕುಡಿತದ ಮತ್ತಿನಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡಿದ್ದಕ್ಕೆ ಈ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಆಟೋಗೆ ಕಾರು ಗುದ್ದಿದೆ. ಸದ್ಯ ಆಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೀಡಾದ ಕಾರಿನಲ್ಲಿ ಒಟ್ಟು ಮೂವರು ಇದ್ದರಂತೆ.
/newsfirstlive-kannada/media/post_attachments/wp-content/uploads/2024/04/accident1-1.jpg)
ಕಾರು ಚಾಲಕ ಮತ್ತು ಸಹ ಪ್ರಯಾಣಿಕರು ಮದ್ಯದ ಪಾರ್ಟಿ ಮಾಡುತ್ತಾ ಬಂದಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಏಕೆಂದರೆ ಕಾರಿನಲ್ಲಿ ಮದ್ಯದ ಬಾಟಲ್​ಗಳು ಮತ್ತು ಪ್ಲಾಸ್ಟಿಕ್ ಲೋಟಗಳು ಪತ್ತೆಯಾಗಿದೆ. ಅಪಘಾತ ಆಗುತ್ತಿದ್ದಂತೆ ಕಾರಿನಲ್ಲಿದ್ದವರು ಎಸ್ಕೇಪ್​ ಆಗಿದ್ದಾರೆ. ಸದ್ಯ ಸ್ಥಳಕ್ಕೆ ಹೊಸ ಬಡಾವಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us