newsfirstkannada.com

ಡಿವೈಡರ್​ಗೆ ಡಿಕ್ಕಿ ಹೊಡೆದ ಸ್ವಿಫ್ಟ್​ ಕಾರು.. ಸ್ಥಳದಲ್ಲೇ ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Share :

Published July 9, 2024 at 12:37pm

  ಕೆಲಸದ ನಿಮಿತ್ತ ಕಾರಿನಲ್ಲಿ ಹೋಗುವಾಗ ನಡೆದ ಅಪಘಾತ

  ಕಾರು ಡಿವೈಡರ್​ಗೆ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವು

  ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವಿಜಯಪುರ: ತಡರಾತ್ರಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಡಿವೈಡರ್‌ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಮಾರ್ಗ ಮಧ್ಯ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: RCB ಕೋಚ್ ಆಗ್ತಾರಾ ರಾಹುಲ್ ದ್ರಾವಿಡ್..? ಚಾಂಪಿಯನ್ ಕೋಚ್​ಗೆ​ ಡಿಮ್ಯಾಂಡಪ್ಪೋ ಡಿಮ್ಯಾಂಡ್!

ಇಂಗಳೇಶ್ವರ ಗ್ರಾಮದ ನಿವಾಸಿಗಳಾದ ಮಲ್ಲು ಡೋಲಗೊಂಡ (32) ಹಾಗೂ ಪರಶು ಮಿಣಜಿಗಿ (26) ಮೃತಪಟ್ಟ ದುರ್ದೈವಿಗಳು. ರೇವಣಸಿದ್ದ ಶೇಕಣ್ಣಿ (27) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ತಡರಾತ್ರಿ ಸ್ವಿಫ್ಟ್​ ಕಾರಿನಲ್ಲಿ ಕೆಲಸದ ನಿಮಿತ್ತ ವೇಗವಾಗಿ ಹೋಗುತ್ತಿದ್ದರು. ಈ ವೇಳೆ ಕಾರು ಡಿವೈಡರ್​​ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ.. ಕಿರಾತಕ ಯಾರನ್ನ ಟಾರ್ಗೆಟ್ ಮಾಡ್ತಿದ್ದ?

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಈ ಸಂಬಂಧ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿವೈಡರ್​ಗೆ ಡಿಕ್ಕಿ ಹೊಡೆದ ಸ್ವಿಫ್ಟ್​ ಕಾರು.. ಸ್ಥಳದಲ್ಲೇ ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

https://newsfirstlive.com/wp-content/uploads/2024/07/VJI_CAR_ACCIDENT.jpg

Load More