ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ
ಬಸ್ ಹಾಗೂ ಮಾರುತಿ 800 ಕಾರಿನ ನಡುವೆ ಮುಖಾಮುಖಿ ಡಿಕ್ಕಿ
ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ರಾಜಹಂಸ ಬಸ್ ಹಾಗೂ ಮಾರುತಿ 800 ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರೋ ಘಟನೆ ಬೆಂಗಳೂರು-ಮೈಸೂರು ಹೈವೆಯ ಹೆದ್ದಾರಿಯ ಕೆ. ಕೋಡಿಹಳ್ಳಿ ಮದ್ದೂರು ಬೈಪಾಸ್ನಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರಾಜಹಂಸ ಬಸ್ ಹಾಗೂ ಮಾರುತಿ 800 ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಸರಣಿ ಅಪಘಾತದಲ್ಲಿ ಸಂಭವಿಸಿದೆ. ಇನ್ನು, ಮಾರುತಿ 800 ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ