ಕಾರು ಮತ್ತು KSRTC ಬಸ್ ನಡುವೆ ಭೀಕರ ರಸ್ತೆ ಅಪಘಾತ
ಅಪಘಾತದಲ್ಲಿ ಕೊಡಗಿನ ದಂಪತಿ ಸ್ಥಳದಲ್ಲೇ ದಾರುಣ ಸಾವು
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜು
ಮಡಿಕೇರಿ: ಕಾರು ಮತ್ತು KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರೋ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಳ್ಳಿಯಪ್ಪ ಹಾಗೂ ಪತ್ನಿ ವೀಣಾ ಮೃತ ದುರ್ದೈವಿಗಳು.
ಈ ಭೀಕರ ಅಪಘಾತದಲ್ಲಿ ಮೃತಪಟ್ಟ ಹೆಚ್.ಬಿ.ಬೆಳ್ಳಿಯಪ್ಪ ಅವರು ನಿವೃತ್ತ ಪ್ರಾಂಶುಪಾಲರಾಗಿದ್ದರು. ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ನಿವಾಸಿಗಳಾದ ಇವರು ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಳ್ಳಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಕರ ಅಪಘಾತದಿಂದ ಕಾರು ಸಂಪೂರ್ಣ ನುಜ್ಜುಗುಜ್ಜು ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ