newsfirstkannada.com

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಸಾವು, 6 ಪ್ರಯಾಣಿಕರಿಗೆ ಗಂಭೀರ ಗಾಯ

Share :

12-06-2023

  ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರ್ಘಟನೆ

  ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ

  ಅಪಘಾತಕ್ಕೆ ಕಾರಣ ಏನು ಗೊತ್ತಾ..?

ಚಿತ್ರದುರ್ಗದ ವಿಜಾಪುರ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 6 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಗುದ್ದಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಟೊಯೊಟಾ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ, 6 ಮಂದಿ ಗಾಯಗೊಂಡಿದ್ದಾರೆ.

ಕಾರು ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಚಲಿಸುತ್ತಿತ್ತು ಎನ್ನಲಾಗುತ್ತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ ಹೊಡೆದು ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಸಾವು, 6 ಪ್ರಯಾಣಿಕರಿಗೆ ಗಂಭೀರ ಗಾಯ

https://newsfirstlive.com/wp-content/uploads/2023/06/Chitradurga-1.jpg

Load More