/newsfirstlive-kannada/media/post_attachments/wp-content/uploads/2024/07/car-Accident-6.jpg)
ಮಂಡ್ಯ: ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಇದೆಂಥಾ ದುರ್ಗತಿ! ಒಂದೇ ದಿನ 7 ಜನ ಸಾವು.. ಈ ಊರಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನವೇ ಇಲ್ಲ
ಇಂದು ಬೆಳಗಿನ ಜಾವ ನಾಗಮಂಗಲ-ಪಾಂಡವಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಇದಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ಯುವರಾಜ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಿಪ್ಪೇಸ್ವಾಮಿ ಬೆಳ್ಳೂರು ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/07/car-Accident-7.jpg)
ಮೃತರೆಲ್ಲರೂ ಚಿತ್ರದುರ್ಗ ಜಿಲ್ಲೆ ಮೂಲದವರಾಗಿದ್ದು, ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us