/newsfirstlive-kannada/media/post_attachments/wp-content/uploads/2024/06/Accident-1-1.jpg)
ರಾಮನಗರ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿರುವ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ತಡರಾತ್ರಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.. ಕಾರಿಗೆ ಗುದ್ದಿದ ಲಾರಿ.. ನಾಲ್ವರು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ.
ಇದನ್ನೂ ಓದಿ: ಬದಲಾಯ್ತು ನಟನ ಮನಸ್ಥಿತಿ.. ತಪ್ಪಾಯ್ತು.. ತಪ್ಪಾಯ್ತು ಅಂತಿದ್ದಾರಂತೆ ದರ್ಶನ್!
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದ ಲಾರಿ ಚಾಲಕನ ವಿರುದ್ಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ