ಓವರ್ ಟೇಕ್ ಮಾಡಲು ಹೋಗಿ ಬೇವಿನ ಮರಕ್ಕೆ ಕಾರು ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಇಬ್ಬರು ಯುವಕರು

author-image
Bheemappa
Updated On
ಓವರ್ ಟೇಕ್ ಮಾಡಲು ಹೋಗಿ ಬೇವಿನ ಮರಕ್ಕೆ ಕಾರು ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಇಬ್ಬರು ಯುವಕರು
Advertisment
  • ಮುಂದಿದ್ದ ವಾಹನ ಓವರ್​ಟೇಕ್ ಮಾಡುವಾಗ ಅಪಘಾತ ಆಯ್ತಾ?
  • ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಭಯಾನಕವಾಗಿ ಕಾರು ಡಿಕ್ಕಿ
  • ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಎಲ್ಲ ನಜ್ಜುಗುಜ್ಜಾಗಿ ಹೋಗಿದೆ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಭಯಾನಕವಾಗಿ ಬೇವಿನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಉಸಿರು ಚೆಲ್ಲಿದ್ದಾರೆ. ಜಿಲ್ಲೆಯ ಶಿಗ್ಗಾವಿ ಪಟ್ಟಣದ ಬಳಿ ಈ ಅಪಘಾತ ನಡೆದಿದೆ.

ಇದನ್ನೂ ಓದಿ:ಇಂದು ಭಾರತ-ಪಾಕ್ ಮಧ್ಯೆ​ ಫೈನಲ್ ಪಂದ್ಯ.. ಯುವಿ ನೇತೃತ್ವದ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿ ಯಾರೆಲ್ಲ ಇದ್ದಾರೆ..?

ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18) ಮೃತಪಟ್ಟವರು. ಒಟ್ಟು 7 ಜನ ಯುವಕರ ತಂಡ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡಕ್ಕೆ ಕಾರಿನಲ್ಲಿ ಬೆಳಗ್ಗೆ ಹೋಗುತ್ತಿದ್ದರು. ಈ ವೇಳೆ ಶಿಗ್ಗಾವಿ ಪಟ್ಟಣದ ಬಳಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಭಯಾನಕವಾಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment