/newsfirstlive-kannada/media/post_attachments/wp-content/uploads/2025/06/MND-ACCIDENT.jpg)
ಮಂಡ್ಯ: ಕಳೆದ ರಾತ್ರಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ನಿಡಘಟ್ಟ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ.
ಬೆಂಗಳೂರು ಮೂಲದ ಮಸೂದ್, ಅಯಾನ್ ಪ್ರಾಣ ಕಳೆದುಕೊಂಡವರು. ಇನ್ನುಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಖುಷಿ, ಚಿಕ್ಕು, ಮುಜಾಯಿದ್ ಪಾಷಾ, ಬಸವರಾಜು, ಪಾರ್ವತಿ ಅನ್ನೋರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಬೆಂಗಳೂರು ಹಾಗೂ ಮೈಸೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಚುರುಕು.. ರೈತರ ಮೊಗದಲ್ಲಿ ಮಂದಹಾಸ.. ಮಳೆಯ ಅಬ್ಬರ ಹೆಂಗಿದೆ..?
ಬೆಂಗಳೂರಿನಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅತಿವೇಗ ಮತ್ತು ಅಜಾಗರೂಕತೆ ಚಾಲನೆಯಿಂದ ಅಪಘಾತಕ್ಕೆ ಕಾರಣವಾಗಿದೆ. ಇದರಿಂದ ಹೈವೇಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೊನೆಗೆ ಹೈವೇ ಬಂದ್ ಮಾಡಿ ಸರ್ವೀಸ್ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ..
ಇದನ್ನೂ ಓದಿ: ಚೆನಾಬ್ ಬ್ರಿಡ್ಜ್ ಯಶಸ್ಸಿನ ಹಿಂದೆ ಬೆಂಗಳೂರು ಪ್ರಾಧ್ಯಾಪಕಿಯ ಶ್ರಮ.. ಯಾರು ಈ ಮಾಧವಿ ಲತಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ