newsfirstkannada.com

×

Breaking: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರಲ್ಲಿ ಓರ್ವ ಪಾರು, ಮೂವರು ನೀರುಪಾಲು

Share :

Published October 29, 2023 at 9:31am

Update October 29, 2023 at 9:48am

    ವೇಗದಿಂದ ಬಂದು ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಕಾರು

    ಅಗ್ನಿಶಾಮಕ ದಳ ಸಿಬ್ಬಂದಿ ದೌಡು, ಮೂವರಿಗಾಗಿ ಹುಡುಕಾಟ

    ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

ತುಮಕೂರು: ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಸಮೀಪದ ರಾಮಲಿಂಗಾಪುರ ಬಳಿ ನಡೆದಿದೆ. ಕಾರು ನೀರಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ನೀರುಪಾಲಾಗಿದ್ದು, ಓರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದ ನಾಲ್ವರಲ್ಲಿ ಪ್ರವೀಣ್ ಎಂಬಾತ ಪಾರಾಗಿದ್ದು, ಉಳಿದ ಮೂವರಾದ ದೊಡ್ಡಣ್ಣ, ಯಮುನಾ ಮತ್ತು ಚಿಕ್ಕಮ್ಮ ಎಂಬುವವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಕಾರನ್ನ ನೀರಿನಿಂದ ಮೇಲೇತ್ತಲು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರಲ್ಲಿ ಓರ್ವ ಪಾರು, ಮೂವರು ನೀರುಪಾಲು

https://newsfirstlive.com/wp-content/uploads/2023/10/Shira.jpg

Load More