/newsfirstlive-kannada/media/post_attachments/wp-content/uploads/2024/01/Drone-prathap-1.jpg)
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಡ್ರೋನ್ ಪ್ರತಾಪ್ ಮಾತ್ರವಲ್ಲ ಒಟ್ಟು ಮೂವರ ವಿರುದ್ಧ ತುಮಕೂರಿನ ಮಿಡಿಗೇಶಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆದಿರೋದು ಎಲ್ಲಿ..?
ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರಂ ಹೌಸ್ನ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಪರೀಕ್ಷೆ ನಡೆಸಿದ್ದರು. ಕೃಷಿ ಹೊಂಡದಲ್ಲಿ ಬ್ಲಾಸ್ಟ್ ಮಾಡಿ, ಅದರ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಪ್ರತಾಪ್ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಆಧರಿಸಿ ಸುಮೊಟೊ ಕೇಸ್ ದಾಖಲಾಗಿದೆ. ಬಿಎನ್ಎಸ್ ಕಾಯ್ದೆ ಸೆಕ್ಷನ್ 176 ಮತ್ತು ಸಿಆರ್ಪಿಸಿ 158-ಎ ಮತ್ತು ಬಿ ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ:ಡ್ರೋನ್ ಪ್ರತಾಪ್ ಅರೆಸ್ಟ್; ಇರಲಾರದೇ ಇರುವೆ ಬಿಟ್ಕೊಂಡ ಪರಿಸ್ಥಿತಿ..!
ಯಾರ ವಿರುದ್ಧ ಕೇಸ್?
ಡ್ರೋನ್ ಪ್ರತಾಪ್ ಸೇರಿ ಕೃಷಿ ಹೊಂಡದ ಮಾಲೀಕನ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ರಾಯರ ಬೃಂದಾವನ ಫಾರಂನ ಮಾಲೀಕ ಜಿತೇಂದ್ರ ಜೈನ್ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಮತ್ತೋರ್ವ ವ್ಯಕ್ತಿ ಸೇರಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಬೆಂಗಳೂರಲ್ಲಿ ಪ್ರತಾಪ್ ಅವರನ್ನು ಬಂಧಿಸಲಾಗಿದೆ. ಸದ್ಯ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ:ಕೇಸ್ವೊಂದರಲ್ಲಿ ಡ್ರೋನ್ ಪ್ರತಾಪ್ ಅರೆಸ್ಟ್; ಪೊಲೀಸರಿಂದ ತೀವ್ರ ವಿಚಾರಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ