‘ಸ್ವಯಂ ಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ’
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ
‘ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ’
ಮೈಸೂರು: ಟಿ. ನರಸೀಪುರದಲ್ಲಿ ಹನುಮ ಜಯಂತಿ ವೇಳೆ ನಡೆದ ಹಿಂದೂ ಮುಖಂಡ ವೇಣುಗೋಪಾಲ್ ಹತ್ಯೆ ಪ್ರಕರಣ ಇನ್ನೂ ಸದ್ದು ಮಾಡ್ತಿದೆ. ರಾಜಕೀಯ ಬಣ್ಣ ಪಡೆದ ಈ ಕೊಲೆ ಪ್ರಕರಣದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಜೋರಾಗಿದೆ.
ಹಿಂದೂ ಮುಖಂಡ ವೇಣುಗೋಪಾಲ್ ಕೊಲೆ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದವರ ಮೇಲೆ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ತಕ್ಷಣ ಕೊಲೆಯಾಗುತ್ತಿವೆ ಎಂದು ರಾಜೀ ಹಿಂದೂ ಎಂಬ ವ್ಯಕ್ತಿ ಅವಾಚ್ಯ ಶಬ್ಧಗಳನ್ನ ಉಪಯೋಗಿಸಿ ಸರ್ಕಾರಕ್ಕೆ ನಿಂದನೆ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಈ ಕೇಸ್ ದಾಖಲಿಸಲಾಗಿದೆ.
ಇದನ್ನೂ ಓದಿ: ಹನುಮ ಜಯಂತಿ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ; 6 ಜನರ ಮೇಲೆ ಪ್ರಕರಣ ದಾಖಲು
ರಾಜೀ ಹಿಂದೂ ಎಂಬ ವ್ಯಕ್ತಿ ಇನ್ಸ್ಟಾಗ್ರಾಂನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ಸ್ವಯಂ ಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂ ಯುವಕನ ಕೊಲೆಯಾಗಿದೆ ಎಂದು ಸರ್ಕಾರದ ವಿರುದ್ಧ ಕೆಟ್ಟದಾಗಿ ಬರೆದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ರವಿ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಮೈಸೂರು ಸೈಬರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ