/newsfirstlive-kannada/media/post_attachments/wp-content/uploads/2025/06/Delhi-Congress-Meeting.jpg)
ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಪ್ರಮುಖವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರೋ ಕಾರಣ, ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲು ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾತನಾಡಿದರು. ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಜೂನ್ 12ರ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಬರೋಬ್ಬರಿ ₹400 ಕೋಟಿ ಆಸ್ತಿ ಜಪ್ತಿ; ED ಅಧಿಕೃತ ಮಾಹಿತಿ ಪ್ರಕಟ
ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ, ಒಳ ಮೀಸಲಾತಿ ಚರ್ಚೆ ನಡೆಸಲಿದ್ದು, ಕೇಂದ್ರ ಸರ್ಕಾರ ಜಾತಿ ಜನಗಣತಿಗೂ ಮುನ್ನ ಜಾರಿಗೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ