ಜಾತಿ ಜನಗಣತಿ ಸಮೀಕ್ಷಾ ವರದಿ.. ನಾಳೆ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ!

author-image
admin
Updated On
VIDEO: ‘ಏನಿಲ್ಲ.. ಏನಿಲ್ಲ.. ಸುನೀಲನ ತಲೆಯಲ್ಲಿ ಏನಿಲ್ಲ; ಸಿಎಂ ಸಿದ್ದರಾಮಯ್ಯ ಯಾಕೆ ಹೀಗಂದ್ರು?
Advertisment
  • ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಧ್ಯಯನ ವರದಿ–2024
  • ಹೆಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ
  • ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಮಂಡನೆಯಾಗಲಿದೆ.

ಹೆಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015ರ ಏಪ್ರಿಲ್‌ 11ರಿಂದ ಮೇ.30ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ. ಜೊತೆಗೆ ವರದಿಯನ್ನ ಗಣಕೀಕರಣಗೊಳಿಸಲಾಗಿದೆ.

publive-image

ಹಿಂದುಳಿದ ವರ್ಗಗಳ ಆಯೋಗವು ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ 2024ರ ಫೆ.29ರಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕಾಂತರಾಜ್ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಂಡು ಅಧ್ಯಯನ ವರದಿ ಸಲ್ಲಿಸುವಂತೆ ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗಕ್ಕೆ 2023ರ ಜುಲೈ 17ರಂದು ಸರ್ಕಾರ ಪತ್ರ ಬರೆದಿತ್ತು.

ಇದನ್ನೂ ಓದಿ: ಮುಡಾ ಬಳಿಕ ಸಿಎಂ ಸಿದ್ದುಗೆ ಮತ್ತೊಂದು ಕಂಟಕ.. 500 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಅರೋಪ 

ಅದರನ್ವಯ, ಕಾಂತರಾಜ ಆಯೋಗ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಧ್ಯಯನ ವರದಿ–2024 ಮತ್ತು ಸಮೀಕ್ಷೆಯ ಅಂಕಿ ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. 2025ರ ಜನವರಿ 2ರಂದು ನಡೆದಿದ್ದ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ವರದಿಯನ್ನು ಮಂಡಿಸುವ ಪ್ರಸ್ತಾವ ಇತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment