ದೆಹಲಿಯಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿರುವ ಸಭೆ
ಇಂದಿನ ಪ್ರಾಧಿಕಾರದ ಸಭೆಯತ್ತ ಮಂಡ್ಯ ರೈತರ ಚಿತ್ತ
ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ
ತಮಿಳುನಾಡಿಗೆ ನೀರು ಬಿಡುವ ಕುರಿತು ಇಂದು ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ದೆಹಲಿಯಲ್ಲಿ ಮಧ್ಯಾಹ್ನ 2.30ಕ್ಕೆ ಸಭೆ ನಿಗದಿಯಾಗಿದೆ.
ಈಗಾಗಲೇ ನಿಯಂತ್ರಣ ಸಮಿತಿ ನೀರು ಬಿಡಲು ಶಿಫಾರಸು ಮಾಡಿತ್ತು. ಮುಂದಿನ 15 ದಿನಗಳು 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸಿತ್ತು. ಇಂದಿನ ಸಭೆಯಲ್ಲಿ ಸಮಿತಿ ತನ್ನ ಸೂಚನೆಗೆ ಬ್ರೇಕ್ ಹಾಕಿ ನೀರು ಬಿಡೋದು ಬೇಡ ಎಂದು ಪ್ರಾಧಿಕಾರ ಆದೇಶಿಸುತ್ತಾ? ಇಂದಾದರೂ ಮಂಡ್ಯ ರೈತರ ಕೂಗು ಪ್ರಾಧಿಕಾರಕ್ಕೆ ಕೇಳಿಸಿಕೊಳ್ಳುತ್ತಾ ಅಂತ ರೈತರು ಎದುರು ನೋಡುತ್ತಿದ್ದಾರೆ. ಒಂದು ವೇಳೆ ಮತ್ತೆ ತಮಿಳುನಾಡಿಗೆ ನೀರು ಬಿಡಲು ಆದೇಶವಾದ್ರೆ ರೈತರು ಹೋರಾಟಕ್ಕೆ ಸಿದ್ಧರಾಗಿದ್ದಾರೆ.
ಪ್ರಾಧಿಕಾರಕ್ಕೆ ಡ್ಯಾಂನ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎನ್ನಬೇಕು. ಅಷ್ಟಾದರು ನೀರು ಬಿಡಬೇಕು ಎಂದರೆ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸಲ್ಲ ಎಂಬ ಧೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಂಡ್ಯ ರೈತರು ಒತ್ತಾಯಿಸಿದ್ದಾರೆ.
ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ
ಕಾವೇರಿ ಕಣಿವೆಯಲ್ಲಿ ನೀರಿನ ಅಭಾವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ಕರ್ನಾಟಕ ನಿರ್ಧರಿಸಿದೆ. ಕಾವೇರಿ ಕಣಿವೆಯ ಪ್ರಸ್ತುತ ಸ್ಥಿತಿಗತಿ, ನೀರಿನ ಪ್ರಮಾಣ ಎಲ್ಲವನ್ನೂ ಪ್ರಾಧಿಕಾರದ ಮುಂದಿಡಲಿದೆ. ಈ ಮೂಲಕ ನೀರು ಬಿಡಲು ಕಷ್ಟ ಸಾಧ್ಯ ಅನ್ನುವುದನ್ನು ಮನವರಿಕೆ ಮಾಡಿಕೊಡಲು ಕರ್ನಾಟಕದ ಪರ ಅಧಿಕಾರಿಗಳಿಂದ ಸಿದ್ಧತೆ ಮಾಡಿಕೊಂಡಿದ್ದಾರೆ. ಜತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೂ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ