/newsfirstlive-kannada/media/post_attachments/wp-content/uploads/2025/02/DVG_VV_CBI.jpg)
ದಾವಣಗೆರೆ: ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ದಾವಣಗೆರೆ ವಿವಿಯ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಹೈದರಾಬಾದ್ನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಬಂಧಿಸಲಾಗಿದೆ. ಈ ಹಿಂದೆ ವಿಶ್ವವಿದ್ಯಾಲಯದ ಕುಲಸಚಿವೆಯೂ ಆಗಿ ಕಾರ್ಯನಿರ್ವಹಿಸಿದ್ದ ಅವರ ಮನೆಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದಕ್ಕೂ ಮೊದಲು ಸಿಬಿಐ ಅಧಿಕಾರಿಗಳು ವಿಶ್ವವಿದ್ಯಾಲಯದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ:ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ನಿಂದ ಬಂದ ದಾಖಲೆಗಳು ಯಾವ್ಯಾವು ಗೊತ್ತಾ?
ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳಿಗೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್ಟಾಪ್, ಐಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕೆಎಲ್ಇಎಫ್ ವಿಶ್ವವಿದ್ಯಾಲಯದ ನ್ಯಾಕ್ ಕಮಿಟಿ ಪರಿಶೀಲನೆ ವೇಳೆ ಲಂಚ ಪಡೆಯುವಾಗ ಮಹಿಳಾ ಪ್ರೋಫೆಸರ್ ಅನ್ನು ಬಂಧಿಸಲಾಗಿದೆ.
ಇನ್ನು ಈ ಸಂಬಂಧ ಮಾತನಾಡಿರುವ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ ಕುಂಬಾರ, ವಿಶ್ವವಿದ್ಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮಾಡಿರುವುದರ ಬಗ್ಗೆ ಏನು ಗೊತ್ತಿಲ್ಲ. ಗಾಯತ್ರಿ ಅವರನ್ನು ಬಂಧಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ