Advertisment

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮಕ್ಕೆ ಕುಂದಾನಗರಿ ಸಜ್ಜು; ಹೇಗಿರಲಿದೆ ಕೈ ಪಾಳಯದ ಸಮಾವೇಶ?

author-image
Gopal Kulkarni
Updated On
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮಕ್ಕೆ ಕುಂದಾನಗರಿ ಸಜ್ಜು; ಹೇಗಿರಲಿದೆ ಕೈ ಪಾಳಯದ ಸಮಾವೇಶ?
Advertisment
  • ಇಂದಿನಿಂದ ಎರಡು ದಿನ ಕುಂದಾನಗರಿಯಲ್ಲಿ ಕಾಂಗ್ರೆಸ್​ ಕಲರವ
  • ಕಾಂಗ್ರೆಸ್ ಸಂಸದರು, ಎಐಸಿಸಿ ಪ್ರಮುಖರು ಭಾಗಿಯಾಗಲಿದ್ದಾರೆ
  • ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರು

ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಬೆಳಗಾವಿ ನಗರ ಸಂಪೂರ್ಣವಾಗಿ ಸಿದ್ದಗೊಂಡಿದೆ. ಅಷ್ಟೇ ಅಲ್ಲೇ ಇಂದು ಕಾರ್ಯಕಾರಣಿ ಸಭೆಯಲ್ಲಿ ಮಹತ್ವದ ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ ಇದೆ. ಇನ್ನೂ ದೇಶದ ವಿವಿಧ ಮೂಲೆಗಳಿಂದ ಕಾಂಗ್ರೆಸ್ ನಾಯಕರು ಬೆಳಗಾವಿಗೆ ಆಗಮಿಸಿದ್ದು, ಮಹತ್ವದ ಕಾರ್ಯಕಾರಿ ಸಭೆ ನಡೆಯಲಿದೆ.

Advertisment

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜು
1924 ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರು ವರ್ಷಗಳು ತುಂಬುತ್ತಿವೆ. ಹೀಗಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು, ಬೆಳಗಾವಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಜೊತೆಗೆ ಕಾಂಗ್ರೆಸ್ ಬಾವುಟ, ಫೆಕ್ಸ್ ಗಳು ಎಲ್ಲೆಡೆ ರಾರಾಜಿಸುತ್ತಿವೆ.

ಇದನ್ನೂ ಓದಿ: ಸಿಟಿ ರವಿ, ಹೆಬ್ಬಾಳ್ಕರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಅಧಿಕಾರಿಯ ತಲೆದಂಡ..!

ಇಂದು ನಾಳೆ ಎರಡು ದಿನ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿವೆ. ಇದಕ್ಕಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ದಂಡೇ ಕುಂದಾನಗರಿಯಲ್ಲಿ ಬೀಡು ಬಿಟ್ಟಿದೆ. ಇಂದು ಸಂಜೆ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಖರ್ಗೆ ಅವರೇ ಎಲ್ಲರಿಗೂ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. 100ಕ್ಕೂ ಹೆಚ್ಚು ಸಂಸದರು ಹಾಗೂ ಎಐಸಿಸಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

Advertisment

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರು
ಇನ್ನು ವೀರಸೌಧದಲ್ಲಿ ನಡೆಯುವ ಕಾರ್ಯಕಾರಣಿ ಸಭೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಪುನಶ್ಚೇತನಕ್ಕೆ ಹಲವು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ನಾಳೆ ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆಶಿ ಮಾಹಿತಿ ನೀಡಿದ್ರು.

ಇದನ್ನೂ ಓದಿ:ಮುನಿರತ್ನ ತಲೆಗೆ ಮೊಟ್ಟೆ ಎಸೆತ.. R.R ನಗರದಲ್ಲಿ ಮತ್ತೊಂದು ರಣರಂಗ; ಅಸಲಿಗೆ ಆಗಿದ್ದೇನು?

ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿ ಸರ್ವ ರೀತಿ ಸಜ್ಜಾಗಿದೆ. ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆ ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment