/newsfirstlive-kannada/media/post_attachments/wp-content/uploads/2024/06/PETROL-1.jpg)
ಬೆಲೆ ಏರಿಕೆ ಬಿಸಿಯ ನಡುವೆಯೇ ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಈ ಸುಂಕ ಏರಿಕೆ ಯಾವುದೇ ಕಾರಣಕ್ಕೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಲ್ಲ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ₹2 ಹೆಚ್ಚಳ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಸುಂಕಗಳ ಪರಿಣಾಮ ಜಾಗತಿಕ ಕಚ್ಚಾ ತೈಲ ಬೆಲೆಗಳು ಕುಸಿಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆದ್ರೆ ಸುಂಕ ಹೆಚ್ಚಳ ಮಾಡಿದ್ದು ತೈಲ ಕಂಪೆನಿಗಳಿಗೆ ವಿನಃ ಗ್ರಾಹಕರಿಗಲ್ಲ. ಅಂದ್ರೆ ಸುಂಕ ಏರಿಕೆ ಜನರ ಮೇಲೆ ಪರಿಣಾಮ ಬೀರಲ್ಲ ಅಂತ ಕೇಂದ್ರವೇ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ಭಾರತ ಸೇರಿ ಸೌದಿ ಅರೇಬಿಯಾ 14 ದೇಶಗಳಿಗೆ ವೀಸಾ ಬ್ಯಾನ್! ಕಾರಣವೇನು?
ಗ್ರಾಹಕರಿಗಿಲ್ಲ ಸುಂಕದ ಹೊರೆ!
ಕೇಂದ್ರ ಸರ್ಕಾರ ಅಬಕಾರಿ ಸುಂಕ ಏರಿಕೆ ಮಾಡಿದರೂ ಗ್ರಾಹಕರ ಮೇಲೆ ಯಾವುದೇ ಹೊರೆ ಇಲ್ಲ. ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಸಿದೆ. ಪ್ರಸ್ತುತ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19.90 ರೂ. ಮತ್ತು ಡೀಸೆಲ್ ಮೇಲೆ 15.80 ರೂ. ಅಬಕಾರಿ ಸುಂಕವನ್ನು ಸಂಗ್ರಹ ಮಾಡುತ್ತಿತ್ತು. ಈ ಹೆಚ್ಚಳದ ನಂತರ, ಪೆಟ್ರೋಲ್ ಮೇಲಿನ ಸುಂಕವು ಲೀಟರ್‌ಗೆ 21.90 ರೂಪಾಯಿ ಮತ್ತು ಡೀಸೆಲ್ ಮೇಲೆ 17.80 ರೂಪಾಯಿ ಆಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿರುವುದರಿಂದ ಹೊಸ ಅಬಕಾರಿ ಸುಂಕವನ್ನು ಇಂಧನ ಸಂಸ್ಕರಣಾ ಕಂಪನಿಗಳಿಂದ ವಸೂಲಿ ಮಾಡಲಿದೆ.
ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಇನ್ನು ಪೆಟ್ರೋಲ್ ಸುಂಕ ಹೆಚ್ಚಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಏರಿಸುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಬಿಜೆಪಿ ನಾಯಕರು ಜನರಿಗೆ ತಿಳಿಸಬೇಕು ಅಂತ ಟೀಕಿಸಿದ್ದಾರೆ.
ಇದನ್ನೂ ಓದಿ: ಕೇಂದ್ರದಿಂದ ಮತ್ತೊಂದು ಶಾಕ್; ಇಂದಿನಿಂದ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ..!
‘ಇದಕ್ಕೆ ಬಿಜೆಪಿ ನಾಯಕರು ಏನಂತಾರೆ?’
ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ಒಪ್ಪಿಕೊಂಡಿದ್ದಾರೆ. ಈಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು 2 ರೂಪಾಯಿ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಅಂತ ತಿಳಿದುಕೊಳ್ಳಬಯಸುತ್ತೇನೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಒಟ್ಟಾರೆ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ ರಕ್ತಪಾತವಾಗುತ್ತಿದೆ. ಇನ್ನೊಂದು ಕಡೆ ಕಚ್ಚಾ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಇಳಿಕೆ ಕಂಡಿದೆ. ಈ ನಡುವೆಯೂ ಕೇಂದ್ರ ಸರ್ಕಾರ 2 ರೂಪಾಯಿ ಸುಂಕ ಹೆಚ್ಚಿಸಿದೆ. ಆದ್ರೆ ಇದು ಗ್ರಾಹಕರ ಜೇಬಿನ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅನ್ನೋದೇ ಜನರಿಗೆ ನಿಟ್ಟುಸಿರು.
ಇದನ್ನೂ ಓದಿ: ಮಧ್ಯಾಹ್ನ ದ್ವಿತೀಯ PUC ಫಲಿತಾಂಶ.. ಆನ್ಲೈನ್ನಲ್ಲಿ ರಿಸಲ್ಟ್ ನೋಡೋದು ಹೆಂಗೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ