5 ಮತ್ತು 8ನೇ ಕ್ಲಾಸ್‌ ವಿದ್ಯಾರ್ಥಿಗಳಿಗೆ ಶಾಕ್​ ಕೊಟ್ಟ ಕೇಂದ್ರ ಸರ್ಕಾರ; ಪೋಷಕರು ಓದಲೇಬೇಕಾದ ಸ್ಟೋರಿ

author-image
Ganesh Nachikethu
Updated On
5 ಮತ್ತು 8ನೇ ಕ್ಲಾಸ್‌ ವಿದ್ಯಾರ್ಥಿಗಳಿಗೆ ಶಾಕ್​ ಕೊಟ್ಟ ಕೇಂದ್ರ ಸರ್ಕಾರ; ಪೋಷಕರು ಓದಲೇಬೇಕಾದ ಸ್ಟೋರಿ
Advertisment
  • ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ
  • 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇದು ಶಾಕಿಂಗ್​ ನ್ಯೂಸ್​
  • ಮಕ್ಕಳ ಪೋಷಕರು ಓದಲೇಬೇಕಾದ ಪ್ರಮುಖ ಸ್ಟೋರಿ ಇದು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೂ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್​ ನ್ಯೂಸ್​ ಕೊಟ್ಟಿದೆ. ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್​ ಆದಲ್ಲಿ ಮತ್ತೆ ಓದಬೇಕಾಗುತ್ತದೆ.

ಏನಿದು RTE ಕಾಯ್ದೆ ತಿದ್ದುಪಡಿ?

ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆ ನಿಯಮಗಳು 2010ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಕೇಂದ್ರ ಸರ್ಕಾರದ ಹೊಸ ರೂಲ್ಸ್​ ಪ್ರಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್‌ ಆದರೆ ಅದೇ ಕ್ಲಾಸ್​ನಲ್ಲೇ ಮತ್ತೆ ಓದಬೇಕು ಎಂಬುದು.

ಮರು ಪರೀಕ್ಷೆಗೆ ಅವಕಾಶ

ವಿದ್ಯಾರ್ಥಿಗಳು ಫೇಲ್​​ ಆದ 2 ತಿಂಗಳಲ್ಲಿ ರೀ-ಎಕ್ಸಾಮ್​ ಮಾಡಲಾಗುತ್ತದೆ. ಮತ್ತೊಮ್ಮೆ ಪರೀಕ್ಷೆ ಬರೆದು ಪಾಸ್​ ಮಾಡಬಹುದು. ಇಲ್ಲದೆ ಹೋದಲ್ಲಿ ಅದೇ ತರಗತಿಯಲ್ಲೇ ಮುಂದುವರಿಯಬೇಕು ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಹೊಸ ನಿಯಮ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ ಮತ್ತು ಸೈನಿಕ ಶಾಲೆಗಳಿಗೆ ಸೇರಿ 3,000ಕ್ಕೂ ಹೆಚ್ಚು ಶಾಲೆಗಳಿಗೆ ಅನ್ವಯ ಆಗಲಿದೆ.

ಇದನ್ನೂ ಓದಿ:ಸಿರಾಜ್​​ಗೆ ಮಾಸ್ಟರ್​ ಸ್ಟ್ರೋಕ್​ ಕೊಟ್ಟ ಕ್ಯಾಪ್ಟನ್​ ರೋಹಿತ್​​; ಟೀಮ್​ ಇಂಡಿಯಾದಿಂದಲೇ ಔಟ್​​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment