/newsfirstlive-kannada/media/post_attachments/wp-content/uploads/2024/06/NEET_NET_1.jpg)
ನವದೆಹಲಿ: National Eligibility Test (NET) ಹಾಗೂ National Eligibility cum Entrance Test (NEET) ಪರೀಕ್ಷೆ ಪತ್ರಿಕೆ​ಗಳು ಸೋರಿಕೆ ಆಗಿರೋದು ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ಈ ಸಂಬಂಧ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಜಾರಿಗೆ ತಂದಿದ್ದು, ಕಠಿಣ ಶಿಕ್ಷೆಯ ಜೊತೆಗೆ 1 ಕೋಟಿ ರೂಪಾಯಿ ದಂಡ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ.
ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳನ್ನು ಮೇ 5ರಂದು ನಡೆಸಲಾಗಿತ್ತು. ಈ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಸದ್ಯ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ.
ಇದನ್ನೂ ಓದಿ: ಹೆಂಡತಿಯನ್ನ ಕಟ್ಟಿ ಹಾಕಿ, ಗಂಡನಿಗೆ ಚೂರಿ ಇರಿತ​.. ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿದ ಗ್ಯಾಂಗ್
/newsfirstlive-kannada/media/post_attachments/wp-content/uploads/2024/06/NEET-1.jpg)
ಬೆನ್ನಲ್ಲೇ ಕೇಂದ್ರ ಸರ್ಕಾರ ಕಠಿಣ ಕಾಯ್ದೆಯನ್ನು ಜಾರಿ ಮಾಡಿದೆ. ಕಾಯ್ದೆ ಪ್ರಕಾರ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ. ಇದೇ ಕಾಯ್ದೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ), ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ), ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಇಂತಹ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ ಎಂದು ಹೇಳಲಾಗುತ್ತಿದೆ.
ಹೊಸ ಕಾಯ್ದೆಯಲ್ಲಿ ಹೇಗಿರಲಿವೆ ಶಿಕ್ಷೆಗಳು..?
ಪರೀಕ್ಷೆಯ ಪತ್ರಿಕೆಗಳನ್ನು ಸೋರಿಕೆ ಮಾಡುವ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದುವ ಅಪರಾಧಿಗಳಿಗೆ 3 ವರ್ಷಗಳಿಂದ 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ಕಾಯ್ದೆ ಸೂಚಿಸುತ್ತದೆ. 10 ಲಕ್ಷ ರೂಪಾಯಿವರೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ.
ಇದನ್ನೂ ಓದಿ:ಹಾಡಹಗಲೇ ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ಪಾಪಿಗಳು.. ಗಂಡನ ಕಡೆಯವರಿಂದ ನಡೀತಾ ಕೃತ್ಯ?
/newsfirstlive-kannada/media/post_attachments/wp-content/uploads/2024/06/NEET_NET.jpg)
ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಗೊತ್ತಾದರೆ ಪೊಲೀಸರು ವಾರಂಟ್ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಬಹುದು. ಅಕ್ರಮ ನಡೆದಿರುವುದು ಸತ್ಯವೆಂದು ತಿಳಿದರೆ ಕೋರ್ಟ್​​ನಲ್ಲಿ ತಪ್ಪಿತಸ್ತರಿಗೆ ಜಾಮೀನು ಕೂಡ ಸಿಗುವುದಿಲ್ಲ. ಪ್ರಸ್ತುತ ಅಪರಾಧದ ಬಗ್ಗೆ ಗೊತ್ತಿದ್ದರು ಆದರೆ ಅದನ್ನು ವರದಿ ಮಾಡಲು ವಿಫಲರಾಗುವ ಪರೀಕ್ಷಾ ಸೇವಾ ಪೂರೈಕೆದಾರರಿಗೆ ಹಾಗೂ ದುಷ್ಕೃತ್ಯದಲ್ಲಿ ತೊಡಗುವ ಪರೀಕ್ಷಾ ಅಧಿಕಾರಿಗಳು 1 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು. ಜೊತೆಗೆ ಇವರಿಗೆ 5 ವರ್ಷದಿಂದ 10 ವರ್ಷದವರೆಗೆ ಶಿಕ್ಷೆ ನೀಡಲಾಗುತ್ತದೆ ಎಂದು ಕಾಯ್ದೆ ಹೇಳುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us