/newsfirstlive-kannada/media/post_attachments/wp-content/uploads/2023/06/WhatsApp-Image-2023-06-14-at-4.38.16-PM.jpeg)
ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2023)ರ ಫಲಿತಾಂಶವನ್ನು ಜೂನ್ 15ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ನಾಳೆ ಬೆಳಗ್ಗೆ 9.30ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ನ್ಯೂಸ್ ಫಸ್ಟ್​​ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನಿರ್ದೇಶಕಿ ರಮ್ಯಾ ಅವರು ಮಾಹಿತಿ ಕೊಟ್ಟಿದ್ದಾರೆ. ಸಿಇಟಿ ಪರೀಕ್ಷೆಯು ಮೇ 21, 22 ರಂದು ನಡೆದಿತ್ತು. ಈಗಾಗಲೇ ಕೆಇಎ ಸಂಸ್ಥೆಯು ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು ಬರೆದಿದ್ದರು. ಶೇಕಡ 93 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಫಲಿತಾಂಶವನ್ನು ಪ್ರಕಟಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.
ಸಿಇಟಿ-2023ರ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪ್ರಕಟಿಸಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us