/newsfirstlive-kannada/media/post_attachments/wp-content/uploads/2024/04/Prajwal-Revanna-2.jpg)
ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ನಿನ್ನೆ ಒಬ್ಬ ಸಂತ್ರಸ್ತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಜ್ಯ ಮಹಿಳಾ ಆಯೋಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಇದನ್ನೂ ಓದಿ: VIDEO: ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ HDK ಖಡಕ್ ರಿಯಾಕ್ಷನ್; ಹೇಳಿದ್ದೇನು?
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನ್ಯೂಸ್ ಫಸ್ಟ್ ಚಾನೆಲ್‌ಗೆ ಪ್ರತಿಕ್ರಿಯಿಸಿದ್ದಾರೆ. ಮಹಿಳಾ ಆಯೋಗದ ಮುಂದೆ ಹಾಸನದ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಸಂತ್ರಸ್ತರ ಕುಟುಂಬಸ್ಥರಿಗೆ ಕೆಲವರಿಂದ ಬೆದರಿಕೆ ಕೂಡ ಬಂದಿದೆ. ಹೀಗಾಗಿ ಹಾಸನ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ತಿಳಿಸಿದ್ದೇನೆ ಎಂದಿದ್ದಾರೆ.
/newsfirstlive-kannada/media/post_attachments/wp-content/uploads/2024/04/Prajwal-Revanna-Video-Case.jpg)
ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ದೂರು ನೀಡಿರುವ ಸಂತ್ರಸ್ತೆ ಅನೇಕ ಶಾಕಿಂಗ್ ವಿಚಾರಗಳನ್ನು ತಿಳಿಸಿದ್ದಾರೆ. ಅವರು ಅನೇಕ ವಿಚಾರಗಳನ್ನು ಹೇಳಿದ್ದಾರೆ. ಅದನ್ನು ನಾನು ಬಹಿರಂಗವಾಗಿ ಹೇಳೋಕೆ ಸಾಧ್ಯವಿಲ್ಲ. ಈ ರೀತಿಯ ವಿಕೃತ ಪ್ರಕರಣ ದೇಶದ ಇತಿಹಾಸದಲ್ಲಿಯೇ ಮೊದಲು. ಅಧಿಕಾರ ಬಳಸಿ ಹೆಣ್ಣು ಮಕ್ಕಳ, ಮಹಿಳೆಯರ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಒಂದು ಮಾಹಿತಿಯ ಪ್ರಕಾರ ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸುಮಾರು 2 ಸಾವಿರದ 876 ಸಂತ್ರಸ್ತೆಯರಿಗೆ ತೊಂದರೆಯಾಗಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us