Advertisment

ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು.. ಮದುವೆ ಬೆನ್ನಲ್ಲೇ ತಂದೆಯಿಂದ ಸ್ಫೋಟಕ ಹೇಳಿಕೆ

author-image
Veena Gangani
Updated On
ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು.. ಮದುವೆ ಬೆನ್ನಲ್ಲೇ ತಂದೆಯಿಂದ ಸ್ಫೋಟಕ ಹೇಳಿಕೆ
Advertisment
  • ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ
  • ಮಗಳು ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶವಾಗಿ ಮಾತಾಡಿದ ತಂದೆ
  • ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ತಂದೆಯಿಂದ ಸ್ಫೋಟಕ ಹೇಳಿಕೆ

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೊನ್ನೆಯಷ್ಟೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.​ ಚೈತ್ರಾ ಕುಂದಾಪುರ ಮದುವೆಗೆ ಬಿಗ್​ಬಾಸ್​ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು.

Advertisment

ಇದನ್ನೂ ಓದಿ:ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

publive-image

ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ ತಂದೆ ಬಂದಿರಲಿಲ್ಲ. ಆದರೀಗ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮಾಧ್ಯಮದ ಮುಂದೆ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

Advertisment

publive-image

ಚೈತ್ರಾ ಬಿಗ್​ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್​ಬಾಸ್​ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment