newsfirstkannada.com

ವಿಕ್ಟೋರಿಯಾದಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್​​​.. ಅಲ್ಲಿಂದ ನೇರ ಹೋಗಿದ್ದು ಎಲ್ಲಿಗೆ..?

Share :

18-09-2023

    ಸಿಸಿಬಿ ಕಚೇರಿಗೆ ಚೈತ್ರಾ ಕುಂದಾಪುರರನ್ನು ಕರೆತಂದ ಅಧಿಕಾರಿಗಳು

    ಚೈತ್ರಾ ಕುಂದಾಪುರಗೆ ಮೂರು ದಿನಗಳಿಂದ ವಿಕ್ಟೋರಿಯಾದಲ್ಲಿ ಚಿಕಿತ್ಸೆ!

    ಚೈತ್ರಾ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಡಿಸ್ಚಾರ್ಜ್..!

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರು, ಇವತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ವೈದ್ಯರು ಡಿಸ್ಚಾರ್ಜ್ ಮಾಡುತ್ತಿದ್ದಂತೆಯೇ, ಸಿಸಿಬಿ ಅಧಿಕಾರಿಗಳು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ಜೀಪ್​ನಲ್ಲಿ ಕೂರಿಸಿಕೊಂಡು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಚೈತ್ರಾ ಕುಂದಾಪುರ ಜೀಪ್​ನಲ್ಲಿ ಕಣ್ಮುಚ್ಚಿ ಕೂತಿದ್ದರು. ತಲೆಗೆ ಹಾಗು ಮುಖಕ್ಕೆ ಮಾಸ್ಕ್ ಹಾಕಿ ಕೂತಿದ್ದರು. ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪರ ಅವರ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಕಳೆದ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರಿಗೆ ನಡೆಸಿರುವ ಎಲ್ಲಾ ತಪಾಸಣೆಗಳು ನಾರ್ಮಲ್ ಇದೆ. ಇಸಿಜಿ ಕೂಡ ನಾರ್ಮಲ್ ಇದೆ. ನರರೋಗ ತಜ್ಞರು, ಮನೋ ವೈದ್ಯರು ಕೂಡ ಬಂದು ತಪಾಷಣೆ ನಡೆಸಿದರು. ಎಲ್ಲಾ ವೈದ್ಯಾಧಿಕಾರಿಗಳು ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಕ್ಟೋರಿಯಾದಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್​​​.. ಅಲ್ಲಿಂದ ನೇರ ಹೋಗಿದ್ದು ಎಲ್ಲಿಗೆ..?

https://newsfirstlive.com/wp-content/uploads/2023/09/chitra-3.jpg

Load More