ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?

author-image
admin
Updated On
ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?
Advertisment
  • ಭೂಗತ ದೊರೆಗಳ ಮೂಲಕ ಜೀವ ತೆಗೆಸುವುದಾಗಿ ಬೆದರಿಕೆ
  • ಆಸ್ತಿಗಾಗಿ ಹೇಯ ಕೃತ್ಯ ಮಾಡಬಹುದು ಎಂದು ಆರೋಪಿಸಿದ್ದ ತಂದೆ
  • ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಬಾಲಕೃಷ್ಣ ನಾಯ್ಕ್

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ ಆದ ಮೇಲೆ ಸ್ವಂತ ತಂದೆಯೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇಷ್ಟು ದಿನ ಕೌಟುಂಬಿಕ ಜಗಳ ಬರೀ ಬಾಯಿ ಮಾತಿನಲ್ಲೇ ಇತ್ತು. ಆದರೆ ಈಗ ಚೈತ್ರಾ ಕುಂದಾಪುರ ಮೇಲೆ ತಂದೆ ಬಾಲಕೃಷ್ಣ ನಾಯ್ಕ್ ಅವರು ಸಾಲು ಸಾಲು ಆರೋಪ ಮಾಡಿದ್ದಾರೆ. ಚೈತ್ರಾ ಕುಂದಾಪುರ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಂದೆ ಬಾಲಕೃಷ್ಣ ನಾಯ್ಕ್ ಅವರು ನೇರವಾಗಿ ನನ್ನ ಜೀವ ತೆಗೆಯಲು ಚೈತ್ರಾ ಕುಂದಾಪುರ ಸುಪಾರಿ ನೀಡಿದ್ದಾರೆ. ನನ್ನ ಆಸ್ತಿ ಹಾಗೂ ಭೂಮಿಗಾಗಿ ನನ್ನನ್ನ ಬಲಿ ಪಡೆಯಬಹುದು. ಭೂಗತ ದೊರೆಗಳ ಮೂಲಕ ಜೀವ ತೆಗೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಸ್ತಿಗಾಗಿ ಹೇಯ ಕೃತ್ಯವನ್ನು ಮಾಡಬಹುದು ಎಂದು ಆರೋಪಿಸಿದ್ದಾರೆ.

ತಂದೆಯ ಈ ಆರೋಪಕ್ಕೆ ಈಗ ಚೈತ್ರಾ ಕುಂದಾಪುರ ಅವರು ಸಖತ್ ಟಾಂಗ್ ಕೊಟ್ಟಿದ್ದಾರೆ. ಸುಪಾರಿ ಆರೋಪಕ್ಕೆ ಅಡಿಕೆ ಹಿಡಿದು ಚೈತ್ರಾ ಕುಂದಾಪುರ ಅವರು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

publive-image

ಸೋಷಿಯಲ್‌ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು ಹೀಗೆ ತೋಟದಲ್ಲಿ ಓಡಾಡುವಾಗ ಒಂದು ಅಡಿಕೆ ಸಿಕ್ಕಿತು. ಇದಕ್ಕೆ ಹಿಂದಿಯಲ್ಲಿ ‘ಸುಪಾರಿ’ ಅಂತಾರೆ. ತುಳುವಿನಲ್ಲಿ ಏನಂತಾರೆ?? ಎಂದು ಪ್ರಶ್ನಿಸಿದ್ದಾರೆ.

ಚೈತ್ರಾ ಕುಂದಾಪುರ ಅವರ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಬಾಲಕೃಷ್ಣ ನಾಯ್ಕ್ ಅವರು ಸಾಲು, ಸಾಲು ಆರೋಪ ಮಾಡುತ್ತಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಅವರು ನನ್ನ ಮಗಳು ಭೂಗತ ದೊರೆಗಳಿಗೆ ಸುಪಾರಿ ನೀಡಿ ಕೊಲೆ ಮಾಡಿಸುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕುಂದಾಪುರ ತಂದೆ; ಮಗಳ ವಿರುದ್ಧವೇ ಸ್ಫೋಟಕ ಆರೋಪ 

ಇದೇ ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಡಿಕೆ ಹಿಡಿದ ಫೋಟೋ ಹಾಕೋ ಮೂಲಕ ಚೈತ್ರಾ ಕುಂದಾಪುರ ಅವರು ಟಾಂಗ್ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment