ಉಡುಪಿಯ ಸ್ಪಂದನ ಟಿವಿಯಲ್ಲಿ ನಿರೂಪಕಿಯಾಗಿದ್ದರು ಇವರು
ಈ ಬಾರಿಯ ಬಿಗ್ಬಾಸ್ ಸೀಸನ್11ಕ್ಕೆ ಬಂದ ಕುಂದಾಪುರ ಬೆಡಗಿ
ಬಿಜೆಪಿ ಟಿಕೆಟ್ ಕೊಡಿಸುವ ಆರೋಪದಲ್ಲಿ ಜೈಲಿಗೆ ಹೋಗಿದ್ದರು
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಇದೀಗ ಬಿಗ್ಬಾಸ್ ಸೀಸನ್ 11ಕ್ಕೆ ಚೈತ್ರಾ ಕುಂದಾಪುರ ಎಂಟ್ರಿ ಕೊಟ್ಟಿದ್ದಾರೆ. ಬಿಗ್ಬಾಸ್ ಸೀಸನ್ 11ಕ್ಕೆ ಕರಾವಳಿಯ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಬಂದಿದ್ದಾರೆ. ಪ್ರಖರ ಭಾಷಣಗಾರ್ತಿ ಕೂಡ ಹೌದು.
ಇದನ್ನೂ ಓದಿ: 7 ಕೋಟಿ ಪಂಗನಾಮ ಹಾಕಿದ್ದ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ; ಬಿಗ್ಬಾಸ್ ಮನೆಗೆ ಖಡಕ್ ಎಂಟ್ರಿ!
ಇವರು ಉಡುಪಿ ಜಿಲ್ಲೆ ಕುಂದಾಪುರದವರು. ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು. ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದ ಇವರು ಉದಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕಿ ಆಗಿದ್ದರು. ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.
ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅರೆಸ್ಟ್ ಕೂಡ ಮಾಡಿದ್ದರು. ಚೈತ್ರಾ ಮತ್ತವರ ಗ್ಯಾಂಗ್ ಕೇಂದ್ರದ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ನಾಯಕರ ಹೆಸರಲ್ಲಿ ಮೋಸ ಮಾಡಿದ್ದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೆಸರಲ್ಲಿ ನಕಲಿ ನಾಯಕರನ್ನ ಸೃಷ್ಟಿ ಮಾಡಿ ಇವರು ವಂಚನೆ ಮಾಡಿದ್ದರು ಎಂದು ವರದಿಯಾಗಿದ್ದರು. ಸದ್ಯ ವೀಕ್ಷಕರ ವೋಟ್ ಮೂಲಕ ನೇರವಾಗಿ ಸ್ವರ್ಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. 2 ಲಕ್ಷದ 80 ಸಾವಿರ ವೋಟ್ಗಳನ್ನು ಪಡೆದುಕೊಳ್ಳುವ ಮೂಲಕ ನೇರವಾಗಿ ಅಚ್ಚರಿ ರೀತಿಯಲ್ಲಿ ನರಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ