ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಹಣ ವಂಚನೆ ಆರೋಪ
ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಸಿಸಿಬಿ ಕಸ್ಟಡಿಗೆ!
ಮೂರನೇ ಎಸಿಎಂಎಂ ನ್ಯಾಯಾಲಯದಿಂದ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ..!
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪವೊಂದು ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಬೆಂಗಳೂರು ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಮತ್ತಿಡೀ ಗ್ಯಾಂಗ್ ಅನ್ನು ಬಂಧಿಸಿ ಬಳಿಕ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.
ಇನ್ನು, ಕೇಸ್ ವಿಚಾರಣೆ ನಡೆಸಿದ ಬಳಿಕ ಮಹತ್ವದ ತೀರ್ಪು ನೀಡಿದ ಮೂರನೇ ಎಸಿಎಂಎಂ ಕೋರ್ಟ್ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಅನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಚೈತ್ರಾ, ರಮೇಶ್, ಧನರಾಜ್, ಪ್ರಜ್ವಲ್, ಶ್ರೀಕಾಂತ್ ಎಂಬ ಐವರನ್ನು ಕೋರ್ಟ್ ಸಿಸಿಸಿ ಪೊಲೀಸ್ ಕಸ್ಟಡಿಗೆ ಕೊಟ್ಟಿದೆ.
ನನ್ನನ್ನು ಯಾಕೆ ಅರೆಸ್ಟ್ ಮಾಡಿದ್ದಾರೆ ಎಂದು ಗೊತ್ತಿಲ್ಲ ಎಂದು ಚೈತ್ರಾ ನ್ಯಾಯಧೀಶರ ಮುಂದೆ ಕಣ್ಣೀರಿಟ್ಟಿದ್ದಾರೆ. ಇದಕ್ಕೆ ಸಿಸಿಬಿ ಪೊಲೀಸರು, ಎಲ್ಲವೂ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ಉತ್ತರ ನೀಡಿದರು. ಜತೆಗೆ ಮೆಡಿಕಲ್ ರಿಪೋರ್ಟ್ ಮಾಡಿಸಿದ ಬಗ್ಗೆಯೂ ಮಾಹಿತಿ ಕೊಟ್ಟರು. 14 ದಿನಗಳ ಕಾಲ ಕಸ್ಟಡಿಗೆ ಕೊಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕೋರ್ಟ್ 10 ದಿನಗಳ ಕಾಲ ಕಸ್ಟಡಿ ನೀಡುತ್ತಿದ್ದೇವೆ ಎಂದು ತೀರ್ಪು ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ