newsfirstkannada.com

‘ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ..’ ವಿಚ್ಛೇದನ ಬಗ್ಗೆ ಬಿಚ್ಚಿಟ್ಟ ನಿರೂಪಕಿ ಚೈತ್ರಾ ವಾಸುದೇವನ್

Share :

28-07-2023

    ಬಿಗ್ ಬಾಸ್​ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ವಿಚ್ಛೇದನ

    7 ವರ್ಷದ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ಚೈತ್ರಾ ವಾಸುದೇವನ್

    ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ ಎಂದ ನಿರೂಪಕಿ

ಬಿಗ್ ಬಾಸ್​ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ವಿಚ್ಛೇದನ ಘೋಷಿಸಿದ್ದಾರೆ. 7 ವರ್ಷದ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಇದೀಗ ಅಭಿಮಾನಿಗಳ ಮುಂದೆ ಈ ಸಂಗತಿಯನ್ನ ಬಿಚ್ಚಿಟ್ಟಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಮಾಡೆಲ್​, ನಿರೂಪಕಿ, ಚೈತ್ರಾ ವಾಸುದೇವನ್ ಡಿವೋರ್ಸ್​ ಬಗ್ಗೆ ಬರೆದುಕೊಂಡಿದ್ದು, ”ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂದು ಪೋಸ್ಟ್​ ಹಾಕಿದ್ದಾರೆ.

ಚೈತ್ರಾ 2017ರಲ್ಲಿ ಸತ್ಯ ನಾಯ್ಡು ಅವರನ್ನು ವಿವಾಹವಾಗಿದ್ದರು. ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ಕಾರ್ಯಕ್ರಮಗಳಲ್ಲಿ ನಿರೂಪಕಿ ಆಗಿ ಕಾಣಿಸಿಕೊಳ್ಳುತ್ತಿದ್ದರು. ಕಿಚ್ಚ ಸುದೀಪ್​ ನಿರೂಪಣೆಯ ಬಿಗ್ ಬಾಸ್ 7ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಆದರೀಗ ನಿರೂಪಕಿ ಚೈತ್ರಾ ವಾಸುದೇವನ್ ಡಿವೋರ್ಸ್​ ನೀಡಿರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ. ಇನ್ನು ಡಿವೋರ್ಸ್​ಗೆ ಸ್ಪಷ್ಟ ಕಾರಣ ಏನು ಎಂದು ಬಹಿರಂಗವಾಗಿಲ್ಲ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

‘ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ..’ ವಿಚ್ಛೇದನ ಬಗ್ಗೆ ಬಿಚ್ಚಿಟ್ಟ ನಿರೂಪಕಿ ಚೈತ್ರಾ ವಾಸುದೇವನ್

https://newsfirstlive.com/wp-content/uploads/2023/07/Chaitra-vasudeva.jpg

Load More