ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ.. ವಿಷಾದ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ

author-image
Bheemappa
Updated On
ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ.. ವಿಷಾದ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ
Advertisment
  • ಛಲವಾದಿ ನಾರಾಯಣಸ್ವಾಮಿ ಕಾರಿನ ಮೇಲೆ ಬಣ್ಣ ಎರಚಿ ಆಕ್ರೋಶ
  • 3 ಗಂಟೆ ಛಲವಾದಿ ನಾರಾಯಣಸ್ವಾಮಿರನ್ನ ತಡೆದಿದ್ದ ಕಾರ್ಯಕರ್ತರು
  • ಪ್ರಿಯಾಂಕ್ ಖರ್ಗೆ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಏನ್ ಹೇಳಿದ್ರು?

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಪ್ರಿಯಾಂಕ್ ಖರ್ಗೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

publive-image

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಲಬುರಗಿಯಲ್ಲಿ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರ ಹೆಸರು ತೆಗೆದುಕೊಂಡು ಹೇಳಬಾರದಿತ್ತು ಆ ಹೆಸರು ವಾಪಸ್ ತೆಗೆದುಕೊಳ್ಳಿ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಹೀಗಾಗಿ ಪ್ರೀಯಾಂಕ್ ಖರ್ಗೆ ಹೆಸರು ವಾಪಸ್ ತಗೊಂಡಿದ್ದೀನಿ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಗಳನ್ನು ನಿಂದಿಸುವಂತ ಕೆಲಸ ಯಾರು ಮಾಡಬಾರದು. ದೇಶಕ್ಕೆ ಅತೀ ಮುಖ್ಯವಾದವರು ಪ್ರಧಾನಿ. ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೋ ಅವರಿಗೆ ಹೇಳಿದ್ದೆ. ಮೋದಿ ಬೈಯುವುದನ್ನು ಬಿಡಬೇಕೆಂದು ಹೇಳಿದ್ದೆ ಅಷ್ಟೇ. ಏಕೆಂದರೆ ಅವರು ದೇಶದ ಪರವಾಗಿ ಕೆಲಸ ಮಾಡುತ್ತಾರೆ. ಆದರೆ ಇದರಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ತಗೊಂಡಿದ್ದೆ. ಈಗ ಅವರಿಗೆ ನೋವಾಗಿದ್ದರೇ ಅವರ ಹೆಸರು ವಾಪಸ್ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಡು ಆರ್ ಡೈ ಮ್ಯಾಚ್​; ಸೋತರೇ.. ಡೆಲ್ಲಿ, ಮುಂಬೈ ತಂಡಗಳಲ್ಲಿ One Life Line ಯಾರಿಗಿದೆ?

publive-image

ಛಲವಾದಿ ನಾರಾಯಣ ಸ್ವಾಮಿ ಅವರು ಟೀಕಿಸೋ ಭರದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ, ಸಂಕಷ್ಟಕ್ಕೆ ಸಿಲುಕಿದ್ದರು. ಸಚಿವ ಪ್ರಿಯಾಂಕ್​ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್​ ಕಾರ್ಯಕರ್ತರು ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದರುಗಡೆ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಪ್ರವಾಸಿ ಮಂದಿರದ ಒಳಗಿಂದ ನಾರಾಯಣಸ್ವಾಮಿ ಹೊರಬಾರದಂತೆ 3 ಗಂಟೆಗಳ ಕಾಲ ತಡೆದಿದ್ದರು.

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment