ಆಸ್ತಿ ವಿಚಾರಕ್ಕೆ ನಡೆಯುತ್ತಿದ್ದ ಜಗಳ ಸಾವಿಗೆ ಕಾರಣವಾಯ್ತಾ?.
ಕುಟುಂಬದ ಮೂವರು ಒಂದೇ ಬಾರಿ ನೇಣಿಗೆ ಶರಣು, ಶಂಕೆ
ಪೊಲೀಸ್ ತನಿಖೆ ನಂತರವೇ ಗೊತ್ತಾಗಲಿದೆಯಾ ಅಸಲಿ ಸತ್ಯ?
ಚಾಮರಾಜನಗರ: ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿಗಳಾದ ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇವರು ಮನೆಯಲ್ಲಿ ಯಾರು ಕಾಣದಿದ್ದಕ್ಕೆ ಬೆಳಗ್ಗೆ ಪಕ್ಕದ ಮನೆಯವರು ಹೋಗಿ ನೋಡಿದ್ದಾರೆ. ಈ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ.
ಆದರೆ, ಕುಟುಂಬಸ್ಥರು ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಆಗಾಗ ಮನೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆಗುತ್ತಿತ್ತು. ಇದೇ ವಿಚಾರಕ್ಕೆ ಸಾವಿನ ದಾರಿ ಹಿಡಿದರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದ್ರೆ ನಿರ್ದಿಷ್ಟ ಕಾರಣ ಪೊಲೀಸರ ತನಿಖೆ ನಂತರ ಗೊತ್ತಾಗಲಿದೆ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ