newsfirstkannada.com

ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲೆಲ್ಲೂ ವಿಶೇಷ ಪೂಜೆ; ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಅತ್ಯಾಕರ್ಷಕ ತ್ರಿಡಿ ಚಿತ್ತಾರ

Share :

Published August 21, 2023 at 9:14pm

    ಶಾಲಾ ವಿದ್ಯಾರ್ಥಿಗಳಿಂದ ಮೂಡಿದ ಚಂದ್ರಯಾನ-3 ತ್ರಿಡಿ ಚಿತ್ರ

    ISRO ಸಂಸ್ಥೆಯ ಚಂದ್ರಯಾನ 3 ನೌಕೆಯು ಇತಿಹಾಸ ನಿರ್ಮಿಸಲಿ

    ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ವಿಶೇಷ ಪೂಜೆ

ನಾಗರಪಂಚಮಿ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗದೇವರಿಗೆ ಭಕ್ತಾಧಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರಿನ ಹಿರಿಯರು ಸೇರಿ ISRO ಸಂಸ್ಥೆಯ ಚಂದ್ರಯಾನ 3 ಯಶಸ್ವಿಯಾಗಲಿ, ಭಾರತದ ಹೆಸರು ವಿಶ್ವದೆಲ್ಲೆಡೆ ರಾರಾಜಿಸಲಿ ಅಂತಾ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.

ಅದೇ ರೀತಿ ಭಾರತದ ಚಂದ್ರಯಾನ-3 ಯಶಸ್ವಿಯಾಗಲೆಂದು ಪ್ರಾರ್ಥಿಸಿ ದಕ್ಷಿಣಕಾಶಿ ನಂಜನಗೂಡಿನಲ್ಲಿ ದೇಗುಲದ ಮುಂಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು ತ್ರಿಡಿ ಎಫೆಕ್ಟ್ ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನಂಜನಗೂಡಿನ A9 ಆರ್ಟ್ ಸ್ಟುಡಿಯೋ ಚಿತ್ರಕಲಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ವಿವಿಧ ಶಾಲೆಗಳ‌ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ವಿಶೇಷವಾಗಿತ್ತು. ಜೊತೆಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ವಿಶೇಷ ಪೂಜೆ ಮಾಡಿದೆ. ಭಾರತದ ಚಂದ್ರಯಾನ-3 ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಸಿದ್ಧವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವತಿಯಿಂದ ಲ್ಯಾಂಡಿಂಗ್‍ಗೆ ಬೇಕಾದ ಸಿದ್ಧತೆಗಳೂ ಪೂರ್ಣಗೊಂಡಿವೆ.  ಹೀಗಾಗಿ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಎಂದು ನಾಗದೇವರ ಬಳಿ ಪ್ರಾರ್ಥನೆ ಮಾಡ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲೆಲ್ಲೂ ವಿಶೇಷ ಪೂಜೆ; ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಅತ್ಯಾಕರ್ಷಕ ತ್ರಿಡಿ ಚಿತ್ತಾರ

https://newsfirstlive.com/wp-content/uploads/2023/08/isro-3.jpg

Load More