/newsfirstlive-kannada/media/post_attachments/wp-content/uploads/2023/11/Byvijayendra-1.jpg)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಬೈಎಲೆಕ್ಷನ್‌ಗೆ ಡೇಟ್ ಫಿಕ್ಸ್ ಆಗ್ತಿದ್ದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ. ಕಾಂಗ್ರೆಸ್ ಅನ್ನು ಸೋಲಿಸಲು ಪಣ ತೊಟ್ಟಿರುವ ಬಿಜೆಪಿ-ಜೆಡಿಎಸ್ ದೋಸ್ತಿ ಪಾಳಯ ಭಾರೀ ರಣತಂತ್ರ ರೂಪಿಸಿದೆ.
ಮೂರು ಉಪಚುನಾವಣಾ ಕ್ಷೇತ್ರದಲ್ಲಿ ಚನ್ನಪಟ್ಟಣ ಮೂರು ಪಕ್ಷಕ್ಕೆ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಸದ್ಯದ ಮಾಹಿತಿ ಪ್ರಕಾರ ಚನ್ನಪಟ್ಟಣದ ಮೈತ್ರಿ ಟಿಕೆಟ್​ ಬಹುತೇಕ ಜೆಡಿಎಸ್​ ಪಾಲಾಗುವ ಸಾಧ್ಯತೆ ಇದೆ. 2+1 ಅನುಪಾತದಲ್ಲಿ ಮೈತ್ರಿ ಸೀಟ್​ ಹಂಚಿಕೆಯ ಲೆಕ್ಕಾಚಾರ ನಡೆದಿದೆ. ಬಿಜೆಪಿ ಹೈಕಮಾಂಡ್​ ಒಪ್ಪಿಗೆ ಬಳಿಕ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಆಗುವ ಸಾಧ್ಯತೆ ಇದೆ.
/newsfirstlive-kannada/media/post_attachments/wp-content/uploads/2024/08/Cp-Yogeshwar-HDK.jpg)
ಈ ವಾರಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೆಹಲಿಗೆ ತೆರಳುತ್ತಿದ್ದಾರೆ. 3 ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಆಗಲಿದೆ. ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕೆ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ಚಿಹ್ನೆಯಡಿಯಲ್ಲಿ ಅಭ್ಯರ್ಥಿ ಕಣಕ್ಕೆ ಇಳಿಸೋ ಲೆಕ್ಕಾಚಾರ ಹಾಕಲಾಗಿದೆ. ಹೈಕಮಾಂಡ್ ನಾಯಕರ ಭೇಟಿಗೆ ತೆರಳಲಿರುವ ಬಿ.ವೈ.ವಿಜಯೇಂದ್ರ ಅವರು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ರಾಜ್ಯದ ಕೋರ್ ಕಮಿಟಿ ಸದಸ್ಯರು ಬಿಜೆಪಿ ಅಭ್ಯರ್ಥಿ ಫೈನಲ್​ ಮಾಡಿದ್ದಾರೆ. ಅದೇ ಪಟ್ಟಿಯೊಂದಿಗೆ ಹೈಕಮಾಂಡ್ ಭೇಟಿಗೆ ವಿಜಯೇಂದ್ರ ತೆರಳಲಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್​ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​ಗೆ ನಿರಾಸೆ ಆಗುವ ಸಾಧ್ಯತೆ ಇದೆ. ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಹೆಸರನ್ನು ಘೋಷಿಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us