VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?

author-image
admin
Updated On
VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?
Advertisment
  • ರೋಚಕ ಘಟ್ಟ ತಲುಪಿದ ಚನ್ನಪಟ್ಟಣ ಉಪ ಚುನಾವಣೆಯ ಜಿದ್ದು
  • ಕ್ಲೈಮ್ಯಾಕ್ಸ್‌ ಹಂತದಲ್ಲಿ ಟ್ವಿಸ್ಟ್ ಕೊಟ್ಟಿದ್ದ ಸಚಿವ ಜಮೀರ್ ಮಾತುಗಳು
  • ತೀವ್ರ ವಿವಾದಕ್ಕೆ ಗುರಿಯಾದ ಮೇಲೆ ಕ್ಷಮೆ ಕೇಳಿದ ಜಮೀರ್ ಹೇಳಿದ್ದೇನು?

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯ ಹೋರಾಟ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಕೊನೇ ಕ್ಷಣದವರಿಗೂ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಾಗ ಸಚಿವ ಜಮೀರ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೋರಿದ್ದಾರೆ.

ಇದನ್ನೂ ಓದಿ: VIDEO: ಕುಮಾರಸ್ವಾಮಿ ಬಣ್ಣದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಸಚಿವ ಜಮೀರ್ ಅಹ್ಮದ್‌ ಖಾನ್! 

ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಎಂದಿದ್ದು ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಸಚಿವ ಜಮೀರ್ ಅವರ ಮಾತು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಜಮೀರ್ ಅವರು ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಅಂತಿದ್ದೆ. ಅವರು ನನ್ನನ್ನ ಕುಳ್ಳ ಅಂತಿದ್ರು. ನಾನು ಈ ರೀತಿ ಕರೆಯುತ್ತಾ ಇರೋದು ಇಂದು ನಿನ್ನೆಯದಲ್ಲ. ಬಹಳ ವರ್ಷಗಳ ಹಿಂದೆ ನಾವು ಅಷ್ಟೊಂದು ಅನ್ಯೋನ್ಯವಾಗಿ ಇದ್ದೆವು. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment