/newsfirstlive-kannada/media/post_attachments/wp-content/uploads/2024/10/WhatsApp-Image-2024-10-23-at-10.45.37-PM.jpeg)
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ರಾಜ್ಯ ರಾಜಕೀಯದಲ್ಲಿ ಹೈವೋಲ್ಟೇಜ್ ಎಲೆಕ್ಷನ್‌ಗೆ ಸಾಕ್ಷಿಯಾಗಿತ್ತಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಅವರು ಸ್ಪರ್ಧಿಸಿದ ದಿನವೇ ಜೆಡಿಎಸ್ ತನ್ನ ದಾಳ ಉರುಳಿಸಿದೆ. ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ. ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಅವರನ್ನ ಮತ್ತೊಂದು ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಅದ್ಧೂರಿ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಕೆ.. CP ಯೋಗೇಶ್ವರ್ಗೆ ಶುಭ ಹಾರೈಸಿದ ಸಿಎಂ, ಡಿಸಿಎಂ
ಜೆಡಿಎಸ್ ಕಚೇರಿಯಲ್ಲಿ ಇಂದು ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಮಾಡಲು ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಕಾರ್ಯಕರ್ತರು ನಿಖಿಲ್ ಅವರೇ ಅಭ್ಯರ್ಥಿ ಆಗಬೇಕು ಅನ್ನೋ ಒತ್ತಾಯ ಮಾಡಿದರು. ಈ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಖುದ್ದು ನಿಖಿಲ್ ಅವರ ಈ ಮಾತಿನಿಂದ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್ ಎನ್ನಲಾಗಿದೆ.
ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯೋ ಲೆಕ್ಕಾಚಾರ ಅಂತಿಮವಾಗಿದೆ. ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರವೇ ಬಾಕಿ ಉಳಿದಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತುರ್ತು ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಅಧಿಕೃತ ಘೋಷಣೆಗೆ ನಿರ್ಧಾರ ಮಾಡಿದ್ದಾರೆ.
ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡೋದಕ್ಕಿದೆ 5 ಪ್ರಮುಖ ಕಾರಣಗಳಿವೆ.
ಕಾರಣ 01: ನಿಖಿಲ್ ಅಭ್ಯರ್ಥಿಯಾಗಬೇಕೆಂದು ಕಾರ್ಯಕರ್ತರ ಪಟ್ಟು
ಕಾರಣ 02: ಬಿಜೆಪಿ ಹೈಕಮಾಂಡ್ನಿಂದಲೂ ನಿಖಿಲ್ ಸ್ಪರ್ಧೆಗೆ ಒಲವು
ಕಾರಣ 03: ನಿಖಿಲ್ ಸ್ಪರ್ಧಿಸಿದ್ರೆ ಕುಮಾರಸ್ವಾಮಿ ವರ್ಚಸ್ಸಿನ ನೇರ ಲಾಭ
ಕಾರಣ 04: ಯೋಗೇಶ್ವರ್ ವಿರುದ್ಧ ಪ್ರಬಲ ಅಭ್ಯರ್ಥಿಯಾಗೋ ಲೆಕ್ಕಾಚಾರ
ಕಾರಣ 05: ನಡೆಸಿದ 3 ಆಂತರಿಕ ಸರ್ವೇಯಲ್ಲಿ ನಿಖಿಲ್ ಜಯದ ಸುಳಿವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ