/newsfirstlive-kannada/media/post_attachments/wp-content/uploads/2024/10/CP_YOGISHWAR_3.jpg)
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ನ ಕಾರ್ಯಕರ್ತರು, ಮುಖಂಡರೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿದ ಯೋಗೇಶ್ವರ್ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಸಿ.ಪಿ ಯೋಗೇಶ್ವರ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ರಾಮಲಿಂಗಾ ರೆಡ್ಡಿ, ಚಲುವರಾಯ ಸ್ವಾಮಿ ಹಾಗೂ ಡಿಕೆ ಸುರೇಶ್, ಹೆಚ್.ಎಂ ರೇವಣ್ಣ ಸೇರಿದಂತೆ ಕಾಂಗ್ರೆಸ್ನ ಇತರೆ ನಾಯಕರು ಹಾಜರಿದ್ದರು. ಜನರು ಕೂಡ ಹೆಚ್ಚಿನ ಮಟ್ಟದಲ್ಲಿ ನಾಮಪತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಉಪ ಚುನಾವಣೆಗೆ ಎನ್ಡಿಎ ಟಿಕೆಟ್ ಕಡೆಗಣಿಸಿದ ಹಿನ್ನೆಲೆಯಲ್ಲಿ ಮಾಜಿ ಎಂ.ಎಲ್ಸಿ ಯೋಗೇಶ್ವರ್ ಅವರು ಅ.23ರಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಪಕ್ಷಕ್ಕೂ ಸೇರುವ ಮೊದಲು ಯೋಗೇಶ್ವರ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಕಾಂಗ್ರೆಸ್ನಿಂದ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದರು. ಅದರಂತೆ ಇಂದು ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ:ಕರ್ನಾಟಕ ಆರೋಗ್ಯ ಟ್ರಸ್ಟ್ನಲ್ಲಿ ಹಲವು ಹುದ್ದೆಗಳ ನೇಮಕಾತಿ.. ಅರ್ಜಿ ಆಹ್ವಾನ, ತಕ್ಷಣ ಅಪ್ಲೇ ಮಾಡಿ
ಬಳ್ಳಾರಿ ಕಾಂಗ್ರೆಸ್ ಸಂಸದ ಇ ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರು ಸಂಡೂರು ಉಪಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದ ಅಖಾಡಕ್ಕೆ ಇಳಿದಿದ್ದಾರೆ. ಆದರೆ ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ