3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ; ಹೇಳಿದ್ದೇನು?

author-image
admin
Updated On
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ; ಹೇಳಿದ್ದೇನು?
Advertisment
  • 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಅಸಲಿ ಕಾರಣವೇನು?
  • ಉಪಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆ
  • ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ಹಾಕಿದ ನಿಷ್ಠಾವಂತ ಕಾರ್ಯಕರ್ತ

ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್‌ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.

ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.

publive-image

ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜನತೆ ದೇವೇಗೌಡರು, ಕುಮಾರಣ್ಣನನ್ನು ಎತ್ತರಕ್ಕೆ ಬೆಳೆಸಿದವರು -ಸೋಲಿನ ಬಗ್ಗೆ ನಿಖಿಲ್ ಮಾತು.. 

ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment