BREAKING: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ಮುಹೂರ್ತ ಫಿಕ್ಸ್.. ಮೆಗಾ ರಿಸಲ್ಟ್ ಯಾವಾಗ?

author-image
admin
Updated On
BREAKING: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ಮುಹೂರ್ತ ಫಿಕ್ಸ್.. ಮೆಗಾ ರಿಸಲ್ಟ್ ಯಾವಾಗ?
Advertisment
  • ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್‌
  • 3 ಕ್ಷೇತ್ರದಲ್ಲಿ ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
  • ಹೆಚ್​.ಡಿ ಕುಮಾರಸ್ವಾಮಿ, ಬೊಮ್ಮಾಯಿ, ಈ. ತುಕಾರಾಮ್ ರಾಜೀನಾಮೆ

ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್‌ಗೆ ಅಖಾಡ ರೆಡಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕುಮಾರಸ್ವಾಮಿ ಆಣೆ ಪ್ರಮಾಣ ಮಾಡಲಿ -ಸವಾಲ್ ಹಾಕಿದ ಹಳೇ ಸ್ನೇಹಿತ 

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment