/newsfirstlive-kannada/media/post_attachments/wp-content/uploads/2023/11/laxmi-10.jpg)
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಹೆಚ್.ನಿಶ್ಚಲ್ ಅವರು ಭಾರೀ ಹಗರಣ ಮಾಡಿ ಕೋಟಿ, ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
/newsfirstlive-kannada/media/post_attachments/wp-content/uploads/2023/11/BH_NISHCHAL.jpg)
ಇನ್ನು, ಈ ಕೇಸ್​ ಸಂಬಂಧ ನ್ಯೂಸ್​ ಫಸ್ಟ್​ನೊಂದಿಗೆ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ವಿಧಾನ ಪರಿಷತ್​ ಸದಸ್ಯ ಚನ್ನರಾಜ​ ಹಟ್ಟಿಹೊಳಿ, ಈ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ನಿಶ್ಚಲ್ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಕರ್ತವ್ಯ ಅಧಿಕಾರಿ ಆಗಿದ್ದಾರೆ. ನಿಶ್ಚಲ್ ಅವರು ನನಗೆ ಪರಿಚಯ ಇದ್ದಾರೆ. ಆದರೆ ಈ ರೀತಿ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ತನಿಖೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us