newsfirstkannada.com

‘ನೀನು ನಿಜ ಜೀವನದ ಖಳನಾಯಕ’- ನಟ ದರ್ಶನ್​​ ಅರೆಸ್ಟ್‌ಗೆ ಚೇತನ್ ಅಹಿಂಸಾ ಖಡಕ್‌ ರಿಯಾಕ್ಷನ್; ಏನಂದ್ರು?

Share :

Published June 11, 2024 at 6:30pm

  ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳು ಕೋರ್ಟ್​ ಮುಂದೆ ಹಾಜರು

  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅರೆಸ್ಟ್​

  ಟ್ವಿಸ್ಟ್ ಮೇಲೆ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ ರೇಣುಕಾಸ್ವಾಮಿ ಕೊಲೆ ಕೇಸ್​

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಹಾಗೂ ನಟಿ ಪವಿತ್ರ ಗೌಡ ಸೇರಿ 13 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತ ನಟ ದರ್ಶನ್​ ಅರೆಸ್ಟ್​ ಆಗುತ್ತಿದ್ದಂತೆ ನಟ ಚೇತನ್ ಅಹಿಂಸಾ ಅವರು, ನಟ ದರ್ಶನ್​ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ದರ್ಶನ್​​ಗೆ ಯಾವುದೇ ತೊಂದರೆ ಆಗಲ್ಲ, ಯಾಕೆಂದರೆ..’ ಪ್ರಕರಣದ ಬಗ್ಗೆ ವಕೀಲರು ಹೇಳಿದ್ದೇನು?

ಹೌದು, ನಟ ಚೇತನ್​​ ಅಹಿಂಸಾ ಅವರು ಟ್ವೀಟ್​ ಮಾಡುವ ಮೂಲಕ ದರ್ಶನ್​​ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಅಂತ ಬರೆದುಕೊಂಡಿದ್ದಾರೆ.

ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ತನಿಖೆ ನಡೆಸಿದ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್‌ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸುತ್ತಿದ್ದಾರೆ. ಕೆಲವೇ ಕ್ಷಣದಲ್ಲಿ ನಟ ದರ್ಶನ್ ಅವರಿಗೆ ಕಸ್ಟಡಿನಾ? ಅಥವಾ ಜೈಲಾ ಅನ್ನೋದು ನಿರ್ಧಾರವಾಗಲಿದೆ. ಈ ಕೊಲೆ ಪ್ರಕರಣದಲ್ಲಿ ಪೊಲೀಸರು ಪವಿತ್ರಾ ಗೌಡ A1, ನಟ ದರ್ಶನ್ A2, ಪವನ್ A3 ಮಾಡಿದ್ದಾರೆ. ಇನ್ನುಳಿದ 10 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನೀನು ನಿಜ ಜೀವನದ ಖಳನಾಯಕ’- ನಟ ದರ್ಶನ್​​ ಅರೆಸ್ಟ್‌ಗೆ ಚೇತನ್ ಅಹಿಂಸಾ ಖಡಕ್‌ ರಿಯಾಕ್ಷನ್; ಏನಂದ್ರು?

https://newsfirstlive.com/wp-content/uploads/2024/06/chethan.jpg

Load More