newsfirstkannada.com

‘ಫ್ರೀ ಶಕ್ತಿ’ ಸ್ಪೆಷಲ್!! ತಲೆ ಬಾಗಿ ನಮಿಸಿ ಬಸ್​ ಏರಿದ ಅಜ್ಜಿ.. ಸಿದ್ದರಾಮಯ್ಯ ಭಾವುಕ

Share :

12-06-2023

    ಧಾರವಾಡದಲ್ಲಿ ಬಸ್ಸಿಗೆ ನಮಸ್ಕರಿಸಿ ಉಚಿತ ಪ್ರಯಾಣ

    ಯೋಜನೆಗೆ ಟೀಕೆಗಳು, ಕುಹಕ, ವ್ಯಂಗ್ಯಗಳು ಬಂದವು -CM

    ‘ಎಷ್ಟು ಖರ್ಚು ಮಾಡ್ತೀವಿ ಅನ್ನೋದ್ಕಿಂತ..’ ಏನಂದ್ರು ಸಿದ್ದು

ರಾಜ್ಯದ ಮಹಿಳೆಯರಿಗೆ ಫ್ರೀ ಬಸ್ ಟಿಕೆಟ್ ಸಿಕ್ಕಿದೆ. ಈ ನಡುವೆ ಧಾರವಾಡದಲ್ಲೂ ವೃದ್ಧೆಯೊಬ್ಬರು ಈ ಯೋಜನೆಯ ಪ್ರಯೋಜನ ಪಡೆದಿದ್ದು, ಬಸ್ ಏರಿದ ಪರಿ ಗಮನ ಸೆಳೆದಿದೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಂಗಾಡಿ ಎಂಬಾಕೆ ಧಾರವಾಡದಲ್ಲಿ ಬಸ್​​ಗೆ ತಲೆ ಬಾಗಿ ನಮಿಸಿ ಪ್ರವೇಶ ಮಾಡಿದ್ದಾರೆ. ಹೀಗೆ ಬಸ್ಸನ್ನೇರಿದ ಫೋಟೋ ವೈರಲ್ ಆಗಿದ್ದು, ಮೆಚ್ಚುಗೆಗೂ ಪಾತ್ರವಾಗುತ್ತಿದೆ. ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದಿದ್ದ ಇವರು ಅಲ್ಲಿಂದ ಮೊಮ್ಮಗನ ಗೃಹಪ್ರವೇಶಕ್ಕಾಗಿ ಸವದತ್ತಿಗೆ ಹೊರಟಿದ್ದರು. ಫೋಟೋ ನೋಡಿದ ಸಿಎಂ ಸಿದ್ದರಾಮಯ್ಯ ಅವರು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದ್ರು ಅಂತ ಫೋಟೋ ಸಮೇತ ಟ್ವೀಟ್​​ ಮಾಡಿದ್ದಾರೆ.

ಸಿಎಂ ಟ್ವೀಟ್​ನಲ್ಲಿ ಏನಿದೆ..?

ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ.

ಯಾರಿಗೆ ಹಣ ಖರ್ಚು ಮಾಡ್ತಿದ್ದೇವೆ ಅನ್ನೋದು ಮುಖ್ಯ

ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಫ್ರೀ ಶಕ್ತಿ’ ಸ್ಪೆಷಲ್!! ತಲೆ ಬಾಗಿ ನಮಿಸಿ ಬಸ್​ ಏರಿದ ಅಜ್ಜಿ.. ಸಿದ್ದರಾಮಯ್ಯ ಭಾವುಕ

https://newsfirstlive.com/wp-content/uploads/2023/06/DWD_GRAND_MOTHER12062023.jpg

Load More