newsfirstkannada.com

Breaking; ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ

Share :

26-10-2023

    ನಿಂತಿದ್ದ ಸಿಮೆಂಟ್​ ಲಾರಿಗೆ ಡಿಕ್ಕಿ ಹೊಡೆದ ಟಾಟಾ ಸುಮೋ

    ದಟ್ಟವಾದ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿದೆ

    ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಬಳಿ ನಡೆದ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಬೆಳ್ಳಂಬೆಳ್ಳಗ್ಗೆ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ನಿಂತಿದ್ದ ಸಿಮೆಂಟ್ ಬಲ್ಕರ್ ಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದೆ.

ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ಅಪಘಾತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ ಬಹುತೇಕರು ಸಾವನ್ನಪ್ಪಿದ್ದಾರೆ. ಆದರೆ ಮೃತರ ವಿವರ ಇನ್ನೂ ಪತ್ತೆಯಾಗಿಲ್ಲ.

ಆಂಧ್ರಪ್ರದೇಶದಿಂದ ಬೆಂಗಳೂರಿನತ್ತ ತೆರಳುವ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ 4 ಜನರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking; ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ

https://newsfirstlive.com/wp-content/uploads/2023/10/Chikkaballapura-Accident.jpg

Load More